ಭದ್ರಾವತಿಗೆ ಬಿ.ವೈ.ವಿಜಯೇಂದ್ರ ಭೇಟಿ, ಕಾಂಗ್ರೆಸಿಗರ ಗೂಂಡಾಗಿರಿಗೆ ಇತಿಶ್ರೀ ಎಚ್ಚರಿಕೆ

 

 

ಸುದ್ದಿ ಕಣಜ.ಕಾಂ
ಭದ್ರಾವತಿ: ನಗರದಲ್ಲಿ ಇತ್ತೀಚೆಗೆ ಕಬಡ್ಡಿ ಪಂದ್ಯಾವಳಿ ವೇಳೆ ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಖಂಡಿಸಿದ್ದಾರೆ.

ಇದನ್ನೂ ಓದಿ | ಮಲೆನಾಡ ಪ್ರವಾಸೋದ್ಯಮಕ್ಕೆ ಡಿಜಿಟಲ್ ಟಚ್!

ಬಿಜೆಪಿಯ ಭದ್ರಾವತಿ ತಾಲೂಕು ಅಧ್ಯಕ್ಷ ಪ್ರಭಾಕರ್ ಅವರ ಮನೆಗೆ ಸೋಮವಾರ ಭೇಟಿ ನೀಡಿದ ಅವರು ಕಾರ್ಯಕರ್ತರ ಆರೋಗ್ಯ ವಿಚಾರಿಸಿದರು. ಅವರೊಂದಿಗೆ ತಾವಿದ್ದೇವೆ ಎಂದು ಧೈರ್ಯ ಹೇಳಿದರು.
ಗೂಂಡಾಗಿರಿಗೆ ಅವಕಾಶ ನೀಡುವುದಿಲ್ಲ | ಕಾಂಗ್ರೆಸ್ ಗೂಂಡಾಗಿರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ. ಕಾಂಗ್ರೆಸಿಗರ ಗೂಂಡಾಗಿರಿಗೆ ಇತಿಶ್ರೀ ಹಾಡಲಾಗುವುದು ಎಂದರು.
ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಕಾಂಗ್ರೆಸ್ ಶಾಸಕ ಸಂಗಮೇಶ್ವರ್ ಹಾಗೂ ಅವರ ಬೆಂಬಲಿಗರು ಹಲ್ಲೆ ಮಾಡಿದ್ದಾರೆ. ಇಂತಹ ಗೂಂಡಾಗಿರಿಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದರು.
ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಬಿ.ಕೆ.ಶ್ರೀನಾಥ್, ಧರ್ಮಪ್ರಸಾದ್, ನಗರ ಅಧ್ಯಕ್ಷ ಪ್ರಭಾಕರ್, ಪ್ರಮುಖರಾದ ರುದ್ರೇಶ್ ಮಂಗೋಟೆ, ರಾಮಲಿಂಗಯ್ಯ ಉಪಸ್ಥಿತರಿದ್ದರು.

error: Content is protected !!