ಶಿವಮೊಗ್ಗಕ್ಕೆ ನಾಳೆ ಬರಲಿದ್ದಾರೆ ಚಕ್ರವರ್ತಿ ಸೂಲಿಬೆಲೆ, ಕಾರಣವೇನು?

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ನಗರದ ನೆಹರೂ ಕ್ರೀಡಾಂಗಣದಲ್ಲಿ ಮಾರ್ಚ್ 27ರಂದು ನರೇಂದ್ರ ಮೋದಿ ವಿಚಾರ ಮಂಚ್ ಜಿಲ್ಲಾ ಘಟಕ ಆಯೋಜಿಸಿರುವ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಭಾಗವಹಿಸಲಿದ್ದಾರೆ.

ಇದನ್ನೂ ಓದಿ | ಕೂಪನ್ ಹಾಕಿ, ‘ಯುವರತ್ನ’ ಚಿತ್ರ ಉಚಿತವಾಗಿ ನೋಡಿ!

ಅಂದು ಸಂಜೆ 5.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ `ಒಂದು ದೇಶ, ಒಂದು ಚುನಾವಣೆ’ ಕುರಿತು ಉಪನ್ಯಾಸ ನೀಡಲಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಮಂಚ್ ರಾಷ್ಟ್ರೀಯ ಅಧ್ಯಕ್ಷ ರವಿ ಚಾಣಕ್ಯ, ಮಾಜಿ ಸಭಾಪತಿ ಡಿ.ಎಸ್.ಶಂಕರಮೂರ್ತಿ, ಶಾಸಕರಾದ ಆಯನೂರು ಮಂಜುನಾಥ್, ಎಸ್.ರುದ್ರೇಗೌಡ, ಕೆ.ಬಿ.ಅಶೋಕ್ ನಾಯ್ಕ ಸೇರಿ ಹಲವರು ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಮಂಚ್ ನ ರಾಜ್ಯಾಧ್ಯಕ್ಷ ಬಳ್ಳೆಕೆರೆ ಸಂತೋಷ್ ಅವರು ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.

ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮಂಚ್ ಸದಸ್ಯ ಹರಿಕೃಷ್ಣ, ಚಕ್ರವರ್ತಿ ಸೂಲಿಬೆಲೆ ಅವರು ಉಪನ್ಯಾಸ ನೀಡಲು ಬರುತ್ತಿದ್ದಾರೆ. ಅದು ರಾಜಕೀಯ ಕಾರಣವಲ್ಲ. ಜತೆಗೆ, ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟಿನಿಟ್ಟಿನಿಂದ ಪಾಲಿಸಲಾಗುವುದು ಎಂದರು.

ಮಂಚ್ ಜಿಲ್ಲಾಧ್ಯಕ್ಷ ಪ್ರಶಾಂತ್ ಪಂಡಿತ್, ಪ್ರಮುಖರಾದ ಸುರೇಖಾ ಮುರುಳೀಧರ್, ಲಕ್ಷ್ಮಿ ಶ್ರೀನಿವಾಸ್, ಚಂದ್ರಶೇಖರ್, ಗಣೇಶ್ ಅಂಗಡಿ, ರಾಜೇಶ್ ಕಾಮತ್, ದೀನದಯಾಳ್ ಉಪಸ್ಥಿತರಿದ್ದರು.

https://www.suddikanaja.com/2021/03/26/nsui-protest-against-giving-permission-to-sulibele-program-in-nehru-stadium/

 

error: Content is protected !!