ಕೋವಿಡ್ ಕುರಿತು ತಜ್ಞರು, ಹಿರಿಯ ಅಧಿಕಾರಿಗಳೊಂದಿಗಿನ ಸಿಎಂ ಸಭೆ, ಏನೇನು ಚರ್ಚೆ ನಡೀತು, ಕೈಗೊಂಡ ನಿರ್ಧಾಗಳೇನು, ಇಲ್ಲಿದೆ ಮೀಟಿಂಗ್ ಹೈಲೈಟ್ಸ್

 

 

ಸುದ್ದಿ ಕಣಜ.ಕಾಂ
ಬೆಂಗಳೂರು: ಕಳೆದ 14 ದಿನಗಳಿಂದ ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ವೈರಸ್ ಹೊಸ ಕಂಟಕ ತಡೆಯುವ ಉದ್ದೇಶದಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ತಜ್ಞರು, ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಅದರ ಹೈಲೈಟ್ಸ್ ಇಲ್ಲಿವೆ.

  1. ಕಳೆದ ದಿನಗಳಲ್ಲಿ ಪಾಸಿಟಿವ್ ರೇಟ್ ಹೆಚ್ಚು, ಮರಣ ಕಡಿಮೆ
  2. ಬೀದರ್,ಕಲಬುರಗಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಉಡುಪಿ, ದಕ್ಷಿಣ ಕನ್ನಡ, ತುಮಕೂರು ಜಿಲ್ಲೆಗಳಲ್ಲಿ ಪಾಸಿಟಿವಿಟಿ ರೇಟ್ ಹೆಚ್ಚು
  3. ಕೋವಿಡ್ 19ರ ಎರಡನೇ ಅಲೆಯ ಮುನ್ಸೂಚನೆ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
  4. ಮದುವೆ ಮತ್ತಿತರ ಸಾಮಾಜಿಕ, ಧಾರ್ಮಿಕ ಹಾಗೂ ರಾಝಕೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರ ಸಂಖ್ಯೆಯನ್ನು ಮಾರ್ಗಸೂಚಿ ಅನ್ವಯ ಕಟ್ಟುನಿಟ್ಟಿನ ನಿಯಂತ್ರಣಕ್ಕೆ ಸೂಚನೆ
  5. ಮಾಸ್ಕ್ ಧಾರಣೆ, ಸಾಮಾಜಿಕ ಅಂತರ, ನೈರ್ಮಲ್ಯ ಕಾಯ್ದುಕೊಳ್ಳುವುದು ಕಡ್ಡಾಯ, ಉಲ್ಲಂಘನೆಗೆ ಕಟ್ಟುನಿಟ್ಟಿನ ದಂಡ
  6. ಪರೀಕ್ಷೆ ಪ್ರಮಾಣದಲ್ಲಿ ಏರಿಕೆ
  7. ಸಂಪರ್ಕಿತರ ಪತ್ತೆ ಹಚ್ಚುವ ಕಾರ್ಯ ಚುರುಕುಗೊಳಿಸುವುದು.
  8. ಕೋವಿಡ್ ಆಸ್ಪತ್ರೆಗಳು, ಆಕ್ಸಿಜನ್ ಪೂರೈಕೆ ಇರುವ ಹಾಸಿಗೆಗಳು, ಐಸಿಯು ಲಭ್ಯತೆ ಹಾಗೂ ಕೋವಿಡ್ ಕೇರ್ ಸೆಂಟರ್ ಸ್ಥಾಪನೆಗೆ ಅಗತ್ಯ ಸಿದ್ಧತೆ
  9. ಹಿರಿಯ ನಾಗರಿಕರಿಗೆ ಲಸಿಕೆ ಹಾಕುವ ಕಾರ್ಯ ಚುರುಕು, ವಿಶೇಷವಾಗಿ ಗ್ರಾಮೀಣ ಪ್ರದೇಶ, ಕೊಳೆಗೇರಿಗಳಲ್ಲಿ ಲಸಿಕೆ ಪ್ರಮಾಣ ಹೆಚ್ಚಳ
  10. ಸಾರ್ವಜನಿಕ ವಾಹನಗಳಲ್ಲಿ ನಿಗದಿತ ಸಂಖ್ಯೆಗಿಂತ ಅಧಿಕ ಜನ ಪ್ರಯಾಣಿಸುವುದಕ್ಕೆ ಬ್ರೇಕ್
  11. ಮುನ್ನೆಚ್ಚರಿಕ ಕ್ರಮಗಳ ಕುರಿತು ಸಾರ್ವಜನಿಕರಲ್ಲಿ ಹೆಚ್ಚೆಚ್ಚು ಜಾಗೃತಿ ಮೂಡಿಸುವುದು.

ಇದನ್ನೂ ಓದಿ | ಮಲೆನಾಡ ಪ್ರವಾಸೋದ್ಯಮಕ್ಕೆ ಡಿಜಿಟಲ್ ಟಚ್!

error: Content is protected !!