ಸದನದಲ್ಲಿ ಅಂಗಿ ಬಿಚ್ಚಿದ ಶಾಸಕ ಬಿ.ಕೆ.ಸಂಗಮೇಶ್ವರ್ ಅವರಿಗೆ ಒಂದು ವಾರ ಸಸ್ಪೆಂಡ್

 

 

ಸುದ್ದಿ ಕಣಜ.ಕಾಂ
ಬೆಂಗಳೂರು: ಸದನದಲ್ಲಿ ಅಂಗಿ ಬಿಚ್ಚಿದ ಕಾರಣಕ್ಕೆ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರನ್ನು ಒಂದು ವಾರ ಅಮಾನತುಗೊಳಿಸಿ ಸ್ಪೀಕರ್ ಆದೇಶಿಸಿದ್ದಾರೆ.
ಗುರುವಾರದಿಂದ ಆರಂಭಗೊಂಡಿರುವ ಬಜೆಟ್ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಈ ವೇಳೆ, ಸಂಗಮೇಶ್ವರ್ ಅವರು ಶರ್ಟ್ ಬಿಚ್ಚಿ ದ್ದಾರೆ ಎಂಬ ಕಾರಣಕ್ಕೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಮಾರ್ಚ್ 12ರ ವರೆಗೆ ಸದನದಲ್ಲಿ ಪಾಲ್ಗೊಳ್ಳದಂತೆ ನಿರ್ದೇಶನ ನೀಡಿದ್ದಾರೆ.
ಇದಾದ ನಂತರ ಸದನ ಪ್ರವೇಶಿಸಲು ಸಂಗಮೇಶ್ವರ್ ಅವರು ಪ್ರಯತ್ನಿಸಿದ್ದಾರೆ. ಆದರೆ, ಮಾರ್ಷಲ್ ಗಳು ಅವರನ್ನು ಒಳಹೋಗದಂತೆ ತಡೆದಿದ್ದಾರೆ. ಇದಕ್ಕೆ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

error: Content is protected !!