ಸುದ್ದಿ ಕಣಜ.ಕಾಂ
ಶಿವಮೊಗ್ಗ: ಜಿಲ್ಲೆಯಲ್ಲಿ ಮಂಗಳವಾರ 22 ಜನರಿಗೆ ಕೊರೊನಾ ಸೋಂಕು ತಗಲಿರುವುದು ದೃಢಪಟ್ಟಿದೆ. ಆದರೆ, ಇಂದು ಯಾವುದೇ ವಿದ್ಯಾರ್ಥಿ ಹಾಗೂ ಸಿಬ್ಬಂದಿಗೆ ಪಾಸಿಟಿವ್ ಬಂದಿಲ್ಲ.
ಇದನ್ನೂ ಓದಿ | ಕೂಪನ್ ಹಾಕಿ, ‘ಯುವರತ್ನ’ ಚಿತ್ರ ಉಚಿತವಾಗಿ ನೋಡಿ!
2,606 ಜನರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿದ್ದು, 1,882 ವರದಿ ನೆಗೆಟಿವ್ ಬಂದಿವೆ. ಪಾಸಿಟಿವ್ ಬಂದವರಲ್ಲಿ 67 ಜನರನ್ನು ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, 33 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಹಾಗೂ 70 ಜನ ಹೋಮ್ ಐಸೋಲೇಷನ್ ನಲ್ಲಿದ್ದಾರೆ. 170 ಸಕ್ರಿಯ ಪ್ರಕರಣಗಳಿವೆ.
ತಾಲೂಕುವಾರು ವರದಿ | ಶಿವಮೊಗ್ಗ 11, ಭದ್ರಾವತಿ 4, ಸಾಗರ 3, ಹೊಸನಗರ 1 ಪ್ರಕರಣಗಳು ಪತ್ತೆಯಾಗಿದ್ದು, ಶಿಕಾರಿಪುರ, ತೀರ್ಥಹಳ್ಳಿ, ಸೊರಬ ಯಾವುದೇ ಹೊಸ ಪ್ರಕರಣ ಪತ್ತೆಯಾಗಿಲ್ಲ.