80 ಅಡಿ ಆಳಕ್ಕೆ ಬಿದ್ದ ವ್ಯಕ್ತಿಯ ರಕ್ಷಿಸಿದ ಅಗ್ನಿಶಾಮಕ ದಳ ಸಿಬ್ಬಂದಿ, ಮಧ್ಯರಾತ್ರಿ ಕಾರ್ಯಾಚರಣೆ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಸಾಗರ ರಸ್ತೆಯಲ್ಲಿರುವ 80 ಅಡಿ ಆಳದ ತುಂಗಾ ಚಾನಲ್ ಗೆ ವ್ಯಕ್ತಿಯೊಬ್ಬರು ಸೋಮವಾರ ತಡರಾತ್ರಿ ಬಿದಿದ್ದು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.

VIDEO REPORT

ಇದನ್ನೂ ಓದಿ | ಮಲೆನಾಡ ಪ್ರವಾಸೋದ್ಯಮಕ್ಕೆ ಡಿಜಿಟಲ್ ಟಚ್!

ಸಾಗರದ ಸಂತೋಷ್(45) ಎಂಬುವವರು ಆಳವಾದ ತಗ್ಗಿನಲ್ಲಿ ಬಿದ್ದಿದ್ದಾರೆ. ಯಾವ ರೀತಿಯಲ್ಲಿ ಬಿದ್ದಿದ್ದಾರೆ ಎಂಬ ಬಗ್ಗೆ ಇದುವರೆಗೆ ಮಾಹಿತಿ ಲಭ್ಯವಾಗಿಲ್ಲ.

Tunga canalಪ್ರಾಣದ ಹಂಗು ತೊರೆದು ಕಾರ್ಯಾಚರಣೆ | ರಾತ್ರಿ ತುಂಗಾ ಚಾನಲ್ ನಲ್ಲಿ ವ್ಯಕ್ತಿಯೊಬ್ಬರು ಬಿದ್ದಿದ್ದಾರೆ ಎಂಬ ವಿಚಾರ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಘಟನಾ ಸ್ಥಳಕ್ಕೆ ದೌಡಾಯಿಸಿದ್ದಾರೆ. ಕತ್ತಲನ್ನೂ ಲೆಕ್ಕಿಸದೇ 80 ಅಡಿ ಆಳದಿಂದ ವ್ಯಕ್ತಿಯನ್ನು ಮೇಲಕ್ಕೆತ್ತುವಲ್ಲಿ ಸಫಲರಾಗಿದ್ದಾರೆ. ಕಾಲು ಮತ್ತು ತಲೆಯ ಭಾಗಕ್ಕೆ ಗಾಯಗಳಾಗಿದ್ದು, ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

error: Content is protected !!