ಚಕ್ರವರ್ತಿ ಸೂಲಿಬೆಲೆ ವಿರುದ್ಧ GO BACK ಘೋಷಣೆ, ಕಾರಣವೇನು?

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ವಾಗ್ಮಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎನ್.ಎಸ್.ಯು.ಐ ಕಾರ್ಯಕರ್ತರು ನಗರದ ನೆಹರೂ ಕ್ರೀಡಾಂಗಣ ಮುಂದೆ ಶನಿವಾರ ಪ್ರತಿಭಟನೆ ನಡೆಸಿದರು.

ಕ್ರೀಡಾಂಗಣದಲ್ಲಿ ರಾಜಕೀಯ ಕಾರ್ಯಕ್ರಮಕ್ಕೆ ಅವಕಾಶ ನೀಡಿದ್ದನ್ನು ವಿರೋಧಿಸಿ ಮುತ್ತಿಗೆಗೆ ಯತ್ನಿಸಿದರು. ಆದರೆ, ಗಸ್ತಿನಲ್ಲಿದ್ದ ಪೊಲೀಸರು ಕಾರ್ಯಕರ್ತರನ್ನು ತಡೆದರು.

ಕೃಷಿ ಕಾಯ್ದೆಗಳನ್ನು ವಿರೋಧಿಸಿ ಇತ್ತೀಚೆಗೆ ನಗರದಲ್ಲಿ ಆಯೋಜಿಸಿದ್ದ ರೈತ ಮಹಾ ಪಂಚಾಯತ್ ಆಯೋಜನೆಗೆ ನೆಹರೂ ಕ್ರೀಡಾಂಗಣದಲ್ಲಿ ಸ್ಥಳಾವಕಾಶ ಕೇಳಲಾಗಿತ್ತು. ಆದರೆ, ಕ್ರೀಡೆ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳಿಗಷ್ಟೇ ಅವಕಾಶ ನೀಡುವುದಾಗಿ ಅಧಿಕಾರಿಗಳು ತಿಳಿಸಿದ್ದರು. ಆದರೆ, ಈಗ ರಾಜಕೀಯ ಕಾರ್ಯಕ್ರಮಕ್ಕೆ ಅವಕಾಶ ನೀಡಲಾಗಿದೆ. ಈ ಮೂಲಕ ತಾರತಮ್ಯ ಪ್ರದರ್ಶಿಸಲಾಗಿದೆ ಎಂದು ಆರೋಪಿಸಿ ಪ್ರತಿಭಟನೆ ಮಾಡಲಾಯಿತು.

ಇದನ್ನೂ ಓದಿ | ಕೂಪನ್ ಹಾಕಿ, ‘ಯುವರತ್ನ’ ಚಿತ್ರ ಉಚಿತವಾಗಿ ನೋಡಿ!

ಚಕ್ರವರ್ತಿ ಸೂಲಿಬೆಲೆ ಅವರು ಸುಳ್ಳುಗಳನ್ನು ಹೇಳುವ ಮೂಲಕ ಯುವಪೀಳಿಗೆಗೆ ತಪ್ಪು ಸಂದೇಶ ನೀಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
ಎನ್‍ಎಸ್‍ಯುಐ ಮುಖಂಡರಾದ ಚೇತನ್ ಗೌಡ, ಬಾಲಾಜಿ ಇತರರಿದ್ದರು.

https://www.suddikanaja.com/2021/03/26/nsui-protest-against-giving-permission-to-sulibele-program-in-nehru-stadium/

error: Content is protected !!