ಸೂಲಿಬೆಲೆ ಕಾರ್ಯಕ್ರಮಕ್ಕೆ ಅವಕಾಶ ನೀಡಿದ್ದಲ್ಲಿ ಖಾಸಗಿ ದೂರು ಸಲ್ಲಿಸುವುದಾಗಿ ಎಚ್ಚರಿಕೆ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ನಗರದ ನೆಹರೂ ಕ್ರೀಡಾಂಗಣದಲ್ಲಿ ಚಕ್ರವರ್ತಿ ಸೂಲಿಬೆಲೆ ಅವರ ಕಾರ್ಯಕ್ರಮಕ್ಕೆ ಅವಕಾಶ ಕಲ್ಪಿಸಿದ್ದಲ್ಲಿ ಜಿಲ್ಲಾಡಳಿತದ ವಿರುದ್ಧ ಖಾಸಗಿ ದೂರು ನೀಡುವುದಾಗಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಕೆ.ಪಿ.ಶ್ರೀಪಾಲ್ ಎಚ್ಚರಿಸಿದ್ದಾರೆ.

ಇದನ್ನೂ ಓದಿ | ಕೂಪನ್ ಹಾಕಿ, ‘ಯುವರತ್ನ’ ಚಿತ್ರ ಉಚಿತವಾಗಿ ನೋಡಿ!

ಸೂಲಿಬೆಲೆ ಭರತನಾಟ್ಯ ಮಾಡಲಿದ್ದಾರೆಯೇ? | ರೈ ಮಹಾ ಪಂಚಾಯತ್ ಆಯೋಜನೆಗೆ ನೆಹರೂ ಕ್ರೀಡಾಂಗಣದಲ್ಲಿ ಅವಕಾಶ ನೀಡುವಂತೆ ಕೇಳಿದ್ದಾಗ ಕ್ರೀಡೆ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳಿಗೆ ಮಾತ್ರ ಅವಕಾಶ ನೀಡುವುದಾಗಿ ಹೇಳಲಾಗಿತ್ತು. ಹಾಗಿದ್ದರೆ, ಮಾರ್ಚ್ 27ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಸೂಲಿಬೆಲೆ ಭರತನಾಟ್ಯವಾಡಲಿದ್ದಾರೆಯೇ ಎಂದು ಖಾರವಾಗಿ ಪ್ರಶ್ನಿಸಿದರು.

error: Content is protected !!