ಮೆಸ್ಕಾಂ ವ್ಯಾಪ್ತಿಯ 4 ಜಿಲ್ಲೆಗಳಿಗೆ ಶಾಕಿಂಗ್ ನ್ಯೂಸ್, ವಿದ್ಯುತ್ ಕೊರತೆ ಹಿನ್ನೆಲೆ ಅನಿಯಮಿತ ಲೋಡ್ ಶೆಡ್ಡಿಂಗ್

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಒಂದೆಡೆ ರಾಜ್ಯದಲ್ಲಿ ಹೆಚ್ಚುತ್ತಿರುವ ಬಿಸಿಲಿನ ಝಳ ಮತ್ತೊಂದೆಡೆ ಮೆಸ್ಕಾಂ ಗ್ರಾಹಕರಿಗೆ ಶಾಕ್ ನೀಡಿದೆ!
ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿ (ಮೆಸ್ಕಾಂ) ವ್ಯಾಪ್ತಿಯ ಶಿವಮೊಗ್ಗ, ಮಂಗಳೂರು, ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

MESCOMಕಾರಣವೇನು? | ಕರ್ನಾಟಕ ಪವರ್ ಕಾರ್ಪೋರೇಷನ್, ಯುಪಿಸಿಎಲ್ ಮತ್ತು ಕೇಂದ್ರೀಯ ವಿದ್ಯುತ್ ಉತ್ಪಾದನಾ ಕೇಂದ್ರಗಳ ವಿದ್ಯುತ್ ಘಟಕಗಳಲ್ಲಿ ತಾಂತ್ರಿಕ ದೋಷ ಕಂಡುಬಂದಿರುವುದರಿಂದ ಕೆಲವು ಘಟಕಗಳಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತಗೊಂಡಿದೆ. ಈ ಹಿನ್ನೆಲೆಯಲ್ಲಿ ಬೇಡಿಕೆಯಷ್ಟು ವಿದ್ಯುತ್ ಪೂರೈಕೆ ಆಗುತ್ತಿಲ್ಲ.

ಇದನ್ನೂ ಓದಿ | ಕೆಜಿಎಫ್ ಚಾಪ್ಟರ್ 2, ಯುವರತ್ನ ಉಚಿತವಾಗಿ ನೋಡುವ ಸುವರ್ಣಾವಕಾಶ

ವಿದ್ಯುತ್ ಕೊರತೆ ಸಂಭವ | ಕೆಪಿಸಿಯಿಂದ ಸುಮಾರು 2,846 ಎಂ.ಡಬ್ಲ್ಯು, ಯುಪಿಸಿಎಲ್ ನಿಂದ ಸುಮಾರು 1,010 ಎಂ.ಡಬ್ಲ್ಯು, ಮತ್ತು ಕೇಂದ್ರೀಯ ವಿದ್ಯುತ್ ಉತ್ಪಾದನಾ ಕೇಂದ್ರಗಳಿಂದ 407 ಎಂ.ಡಬ್ಲ್ಯು ಹೀಗೆ ರಾಜ್ಯದ ವಿದ್ಯುತ್ ಜಾಲವು ಒಟ್ಟು 4,281 ಎಂ.ಡಬ್ಲ್ಯುರಷ್ಟು ಪ್ರಮಾಣದ ವಿದ್ಯುತ್ ಕೊರತೆ ಎದುರಿಸುತ್ತಿದೆ. ಇದರಿಂದಾಗಿ, ಮೆಸ್ಕಾಂಗೆ ಹಂಚಿಕೆಯಾಗುವ ವಿದ್ಯುತ್ ಪ್ರಮಾಣದಲ್ಲಿ ಸುಮಾರು 200 ಎಂ.ಡಬ್ಲ್ಯುನಷ್ಟು ಕೊರತೆಯಾಗುವ ಸಂಭವವಿದೆ.

ಆದುದ್ದರಿಂದ, ಸ್ಟೇಟ್ ಲೋಡ್ ಡಿಸ್ಪ್ಯಾಚ್ ಸೆಂಟರ್ ಸೂಚನೆಯಂತೆ ಮೆಸ್ಕಾಂ ವ್ಯಾಪ್ತಿಯ ಮೆಸ್ಕಾಂ ವ್ಯಾಪ್ತಿಯ ಜಿಲ್ಲೆಯಲ್ಲಿ ವಿದ್ಯುತ್ ಜಾಲದ ಸುರಕ್ಷತೆ ದೃಷ್ಟಿಯಿಂದ ಅನಿಯಮಿತವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಾಸ ಕಂಡುಬರಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಪಂಪ್ ಸೆಟ್ ಕರೆಂಟ್ ಪೂರೈಕೆಯಲ್ಲೂ ಸಮಯ ಬದಲು | ನೀರಾವರಿ ಪಂಪ್‍ಸೆಟ್ ಗಳಿಗೆ ಬೆಳಗ್ಗೆ 9ರಿಂದ ಸಂಜೆ 4 ಗಂಟೆಯವರೆಗೆ ಮತ್ತು ಮಧ್ಯರಾತ್ರಿಯಿಂದ ಬೆಳಗ್ಗೆ 4 ಗಂಟೆಯವರೆಗೆ ಮಾತ್ರ ವಿದ್ಯುತ್ ಪೂರೈಕೆ ಸಾಧ್ಯವಾಗಲಿದೆ.
ಮುಂದಿನ ವಾರದ ವೇಳೆಗೆ ವಿದ್ಯುತ್ ಉತ್ಪಾದನೆಯಲ್ಲಿ ಸುಧಾರಣೆ ನಿರೀಕ್ಷಿಸಲಾಗಿದೆ. ಅಲ್ಲಿಯವರೆಗೆ ಮೆಸ್ಕಾಂ ವ್ಯಾಪ್ತಿಯಲ್ಲಿ ನಿರಂತರ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಉಂಟಾಗುವ ಸಾಧ್ಯತೆ ಇದೆ. ಗ್ರಾಹಕರು ಸಹಕರಿಸಬೇಕೆಂದು ಮನವಿ ಮಾಡಲಾಗಿದೆ.

https://www.suddikanaja.com/2021/02/25/nann-mescom-app-developed-for-consumers/

 

error: Content is protected !!