ಸುದ್ದಿ ಕಣಜ.ಕಾಂ
ಭದ್ರಾವತಿ: ನ್ಯಾಯಾಲಯದ ಆವರಣದಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಕ್ಕೆ ವ್ಯಕ್ತಿಯೊಬ್ಬರಿಗೆ ನ್ಯಾಯಾಲಯ 2 ಸಾವಿರ ರೂಪಾಯಿ ದಂಡ ವಿಧಿಸಿದ್ದು, ನಂತರ ಇಂತಹ ಕೃತ್ಯ ಮಾಡದಂತೆ ಎಚ್ಚರಿಕೆ ನೀಡಿದೆ.
ಇದನ್ನೂ ಓದಿ | ಮಲೆನಾಡ ಪ್ರವಾಸೋದ್ಯಮಕ್ಕೆ ಡಿಜಿಟಲ್ ಟಚ್!
ನ್ಯಾಯಾಲಯದ ಕಲಾಪ ನಡೆಯುವ ವೇಳೆ ಮೊಬೈಲ್ ನಲ್ಲಿ ವ್ಯಕ್ತಿಯೊಬ್ಬರು ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದರು. ಹೀಗಾಗಿ, ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಹೇಮಾವತಿ ದಂಡ ವಿಧಿಸಿದ್ದಾರೆ.
ದಫೇದಾರ್ ಗೂ ಬಿತ್ತು ದಂಡ | ಎಸ್ಬಿಐ ಕ್ರೆಡಿಟ್ ಕಾರ್ಡ್ ಪ್ರಮೋಟ್ ಮಾಡುತ್ತಿದ್ದ ವ್ಯಕ್ತಿಯು ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದರು. ಈ ವೇಳೆ, ದಫೇದಾರ್ ಅಲ್ಲಿಯೇ ಇದ್ದರು. ಅದನ್ನು ತಡೆಯದೇ ಇದ್ದುದ್ದರಿಂದ ಅವರಿಗೆ 1 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ.