ಸುದ್ದಿ ಕಣಜ.ಕಾಂ
ಶಿವಮೊಗ್ಗ: ನಗರ ವ್ಯಾಪ್ತಿಯ ಕೆಲ ಪ್ರದೇಶಗಳಲ್ಲಿ ತಾಂತ್ರಿಕ ಕಾರಣಗಳಿಂದಾಗಿ ಮಾರ್ಚ್ 17ರಂದು ಬೆಳಗ್ಗೆ 9ರಿಂದ 6ರ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಇದನ್ನೂ ಓದಿ | ಮಲೆನಾಡ ಪ್ರವಾಸೋದ್ಯಮಕ್ಕೆ ಡಿಜಿಟಲ್ ಟಚ್!
ನಗರದ ಕೋಟೆ ರಸ್ತೆ, ಅಪ್ಪಾಜಿ ರಾವ್ ಕಾಂಪೌಂಡ್, ಒ.ಬಿ.ಎಲ್. ರಸ್ತೆ, ಪೆನ್ಷನ್ ಮೊಹಲ್ಲಾ, ಬಿ.ಎಚ್ ರಸ್ತೆ, ಸೈನ್ಸ್ ಫೀಲ್ಡ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಮೆಸ್ಕಾಂನ ನಗರ ಉಪ ವಿಭಾಗ 2ರ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ.