ಸುದ್ದಿ ಕಣಜ.ಕಾಂ
ಶಿವಮೊಗ್ಗ: ನಗರದಲ್ಲಿ ಪದೇ ಪದೆ ವಿದ್ಯುತ್ ಕಡಿತಗೊಳಿಸಲಾಗುತ್ತಿದೆ. ಇದರಿಂದ ಬೇಸಿಗೆಯಲ್ಲಿ ಭಾರಿ ಸಮಸ್ಯೆಯಾಗುತ್ತಿದೆ. ಕೂಡಲೇ ಈ ನಿಟ್ಟಿನಲ್ಲಿ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಮಹಾನಗರ ಪಾಲಿಕೆ ಸದಸ್ಯ ಎಚ್.ಸಿ.ಯೋಗೇಶ್ ನೇತೃತ್ವದಲ್ಲಿ ಮೆಸ್ಕಾಂ ಅಧಿಕಾರಿಗೆ ಮಂಗಳವಾರ ಮನವಿ ಸಲ್ಲಿಸಿದರು.
ಇದನ್ನೂ ಓದಿ | ಮಲೆನಾಡ ಪ್ರವಾಸೋದ್ಯಮಕ್ಕೆ ಡಿಜಿಟಲ್ ಟಚ್!
ಕಾಮಗಾರಿ ಇನ್ನಿತರ ಕಾರಣಗಳಿಂದಾಗಿ ಪ್ರತಿ ದಿನ ಕರೆಂಟ್ ಕಡಿತಗೊಳಿಸುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿದೆ. ಮೆಸ್ಕಾಂ ಈ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.