ಸುನೀತಾ ಅಣ್ಣಪ್ಪ ಮೇಯರ್, ಶಂಕರ್ ಗನ್ನಿ ಉಪ ಮೇಯರ್, ಪ್ರತಿಪಕ್ಷದಿಂದಲೂ ನಾಮಪತ್ರ ಸಲ್ಲಿಕೆ, ಯಾರದ್ದೆಷ್ಟು ಬಲಾಬಲ?

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಮೇಯರ್, ಉಪ ಮೇಯರ್ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಆದರೆ, ಅದಕ್ಕೂ ಮುನ್ನವೇ ಮೇಯರ್ ಆಗಿ ಸುನೀತಾ ಅಣ್ಣಪ್ಪ ಹಾಗೂ ಉಪ ಮೇಯರ್ ಆಗಿ ಶಂಕರ್ ಗನ್ನಿ ಅವರನ್ನು ಪಕ್ಷ ಆಯ್ಕೆ ಮಾಡಿದೆ.

ಇದನ್ನೂ ಓದಿ | ಇನ್ಮುಂದೆ ವರ್ಷದ 365 ದಿನ ಹಾಲಿ ಡೇ ಆಫರ್, ಎಲ್ಲಿ ಗೊತ್ತಾ?

ಬುಧವಾರ ಬೆಳಗ್ಗೆ ನಡೆದ ಪಕ್ಷದ ಸಭೆಯಲ್ಲಿ ಬಿಜೆಪಿಯ ಎಲ್ಲ ಕಾರ್ಪೋರೇಟರ್ ಗಳನ್ನು ಒಳಗೊಂಡ ಮೀಟಿಂಗ್ ಮಾಡಲಾಗಿದ್ದು, ಅಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಮೂರನೇ ಅವಧಿಗೆ ಸುನೀತಾ ಅಣ್ಣಪ್ಪ ಅವರನ್ನು ಪ್ರಥಮ ಪ್ರಜೆಯಾಗಿ ಆಯ್ಕೆ ಆಗುವುದು ಬಹುತೇಕ ಖಚಿತಗೊಂಡಿದೆ.
ಉಪ ಮೇಯರ್ ಸ್ಥಾನಕ್ಕೆ ಇ.ವಿಶ್ವಾಸ್ ರೇಸ್ ನಲ್ಲಿದ್ದರು. ಆದರೆ, ಎರಡು ಸಲ ಪಾಲಿಕೆಗೆ ಚುನಾಯಿತರಾದ ಶಂಕರ್ ಗನ್ನಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಮಂಗಳವಾರ ತಡರಾತ್ರಿಯವರೆಗೆ ಉಪ ಮೇಯರ್ ಸ್ಥಾನಕ್ಕಾಗಿ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಎಲ್ಲ ಬೆಳವಣಿಗೆಗಳ ನಡುವೆ ಇಂದು ಬೆಳಗ್ಗೆ ಸ್ಪಷ್ಟ ಚಿತ್ರಣ ಸಿಕ್ಕಿದೆ.
WhatsApp Image 2021 03 10 at 10.12.57 AM 1ಕಾಂಗ್ರೆಸ್ ನಿಂದಲೂ ನಾಮಪತ್ರ ಸಲ್ಲಿಕೆ | ಒಂದೆಡೆ ಶಿವಮೊಗ್ಗ ಮಹಾನಗರ ಪಾಲಿಕೆಯ ಮೇಯರ್, ಉಪ ಮೇಯರ್ ಗದ್ದುಗೆ ಅಲಂಕರಿಸಲು ಬಿಜೆಪಿ ಪಾಳಯದಲ್ಲಿ ಕಾರ್ಪೋರೇಟರ್ ಗಳ ನಡುವೆಯೇ ತೀವ್ರ ಪೈಪೋಟಿ ಏರ್ಪಟ್ಟು ಈಗ ಉಪಶಮನಗೊಂಡಿದೆ. ಮತ್ತೊಂದೆಡೆ ಕಾಂಗ್ರೆಸ್ ನಿಂದಲೂ ನಾಮಪತ್ರ ಸಲ್ಲಿಕೆ ಮಾಡಲಾಗುತ್ತಿದೆ. ಮೇಯರ್ ಸ್ಥಾನಕ್ಕೆ ರೇಖಾ ರಂಗನಾಥ್ ಹಾಗೂ ಉಪ ಮೇಯರ್ ಸ್ಥಾನಕ್ಕೆ ಆರ್.ಸಿ. ನಾಯ್ಕ್ ಅವರು ನಾಮಪತ್ರ ಸಲ್ಲಿಸಿದ್ದಾರೆ.
ಯಾವ ಪಕ್ಷದ್ದೆಷ್ಟು ಬಲಾಬಲ | ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಒಟ್ಟು 35 ವಾರ್ಡ್ ಗಳಿದ್ದು, 23 ಬಿಜೆಪಿ ಸದಸ್ಯರಿದ್ದಾರೆ.

error: Content is protected !!