ರಾಜ್ಯ ಕೃಷಿ ಮೇಳ ಮುಂದೂಡುವ ಸಾಧ್ಯತೆ, ಕಾರಣವೇನು, ಮೇಳಕ್ಕಾಗುತ್ತಿರುವ ಖರ್ಚೆಷ್ಟು ಗೊತ್ತಾ?

 

 

ಸುದ್ದಿ ಕಣಜ.ಕಾಂ
ಸಾಗರ: ತಾಲೂಕಿನ ಭೀಮನಕೋಣೆಯಲ್ಲಿ ಏಪ್ರಿಲ್ 23ರಂದು ನಡೆಸಲು ಉದ್ದೇಶಿಸಲಾಗಿದ್ದ ರಾಜ್ಯಮಟ್ಟದ ಕೃಷಿ ಮೇಳವನ್ನು ಮುಂದೂಡುವ ಸಾಧ್ಯತೆ ಇದೆ.

ಇದನ್ನೂ ಓದಿ | ಮಲೆನಾಡ ಪ್ರವಾಸೋದ್ಯಮಕ್ಕೆ ಡಿಜಿಟಲ್ ಟಚ್!

ಭೀಮನಕೋಣೆಯ ಕೃಷಿ ಹಾಗೂ ಭೂ ಅಭಿವೃದ್ಧಿ ಬ್ಯಾಂಕ್ ಸಭಾಂಗಣದಲ್ಲಿ ಆಯೋಜಿಸಿದ್ದ ಸಮಾಲೋಚನೆ ಸಭೆಯಲ್ಲಿ ಶಾಸಕ ಹರತಾಳು ಹಾಲಪ್ಪ ತಿಳಿಸಿದರು.
ಕಾರಣವೇನು? | ಕೊರೊನಾ ಮಹಾಮಾರಿ ನೆರೆಯ ರಾಜ್ಯಗಳಲ್ಲಿ ಉಲ್ಬಣಗೊಂಡಿದ್ದು ಒಂದೆಡೆಯಾದರೆ ಮತ್ತೊಂದೆಡೆ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ. ಹೀಗಾಗಿ, ಮೇಳವನ್ನು ಅಕ್ಟೋಬರ್ ಇಲ್ಲವೇ ನವೆಂಬರ್ ತಿಂಗಳಲ್ಲಿ ನಡೆಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.

34 ಲಕ್ಷ ರೂ. ವ್ಯಯ | ಕೃಷಿ ಮೇಳಕ್ಕೆ ಅಂದಾಜು 34 ಲಕ್ಷ ರೂಪಾಯಿ ಖರ್ಚಾಗಲಿದೆ ಎಂದು ಅಂದಾಜಿಸಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮೇಳಕ್ಕೆ ಆಗಮಿಸುವುದಾಗಿ ತಿಳಿಸಿದ್ದಾರೆ. ಜತೆಗೆ, ಕೃಷಿ ಸೇರಿದಂತೆ ನಾನಾ ಇಲಾಖೆಯ ಸಚಿವರು ಆಗಮಿಸುವ ಸಾಧ್ಯತೆ ಇದೆ ಎಂದು ಹೇಳಿದರು.

ಕೃಷಿ ಮತ್ತು ತೋಟಗಾರಿಕೆ ವಿವಿಯ ವಿಜ್ಞಾನಿ ಡಾ.ಶಶೀಧರ್, ಪಿ.ಎಲ್.ಡಿ.ಬಿ ಭೀಮನಕೋಣೆಯ ಅಧ್ಯಕ್ಷ ರಾಮಚಂದ್ರಭಟ್ಟ, ಎಪಿಎಂಸಿ ಅಧ್ಯಕ್ಷ ಚೇತನ್ ರಾವ್, ಕಣ್ಣೂರು, ಯು.ಎಚ್.ರಾಮಪ್ಪ ಮತ್ತಿತರರು ಉಪಸ್ಥಿತರಿದ್ದರು.

error: Content is protected !!