ರೈತರ ಮಕ್ಕಳಿಗೆ 10 ತಿಂಗಳ ಟ್ರೈನಿಂಗ್, ಅರ್ಹತೆಗಳೇನು?

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: 2021-22ನೇ ಸಾಲಿನ ತೋಟಗಾರಿಕೆ ಅಧೀನದ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ರೈತರ ಮಕ್ಕಳಿಗೆ 10 ತಿಂಗಳ ತರಬೇತಿ ಕಾರ್ಯಕ್ರಮಕ್ಕೆ ಶಿವಮೊಗ್ಗ ಜಿಲ್ಲೆಯ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹತೆ | ಅರ್ಜಿ ಸಲ್ಲಿಸುವವರು ಎಸ್.ಎಸ್.ಎಲ್.ಸಿಯಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯ ತಂದೆ, ತಾಯಿ, ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು. ಸ್ವಂತ ಸಾಗುವಳಿ ಮಾಡುತ್ತಿರಬೇಕು. ಅಂತಹ ಅಭ್ಯರ್ಥಿಗಳು ತೋಟಗಾರಿಕೆ ಇಲಾಖೆಯ ವೆಬ್‍ಸೈಟ್  https://horticulturedir.karnataka.gov.in ಇಂದ ಅಥವಾ ಜಿಲ್ಲೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಅಥವಾ ಆಯಾ ತಾಲೂಕಿನಲ್ಲಿರುವ ತೋಟಗಾರಿಕೆ ಇಲಾಖೆಯ ಕಚೇರಿಯಿಂದ ಅರ್ಜಿಯನ್ನು ಪಡೆದು ಭರ್ತಿ ಮಾಡಿ ಏಪ್ರಿಲ್ 17ರ ಸಂಜೆ 5 ಗಂಟೆಯೊಳಗೆ ಸಲ್ಲಿಸಬೇಕು. ಮೇ 3 ರಿಂದ 28ರ ವರೆಗೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಹೊಸೂರು ತೊಟಗಾರಿಕೆ ತರಬೇತಿ ಕೇಂದ್ರದಲ್ಲಿ ತರಬೇತಿ ನಡೆಯಲಿದೆ. ಸದುಪಯೋಗ ಪಡೆಯುವಂತೆ ಶಿವಮೊಗ್ಗ ರಾಜ್ಯ ವಲಯದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

https://www.suddikanaja.com/2021/02/14/subsidy-to-drip-irrigation-cm-bs-yadiyurappa/

error: Content is protected !!