ಸುದ್ದಿ ಕಣಜ.ಕಾಂ
ಶಿವಮೊಗ್ಗ: ಬ್ಯಾಂಕ್ ಸೇರಿದಂತೆ ವಿವಿಧೆಡೆ ಸಾಲ ಮಾಡಿಕೊಂಡಿದ್ದ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಭದ್ರಾವತಿ ತಾಲೂಕಿನ ಮಂಜಪ್ಪ(60) ಆತ್ಮಹತ್ಯೆಗೆ ಶರಣಾದ ರೈತ. ಇವರು 2-3 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದರು. ಆದರೆ, ಅದನ್ನು ತೀರಿಸಲಾಗದೇ ವಿಷ ಸೇವಿಸಿದ್ದರು.
ತೀವ್ರ ಅಸ್ವಸ್ಥಗೊಂಡಿದ್ದ ಮಂಜಪ್ಪ ಅವರನ್ನು ಶಿವಮೊಗ್ಗ ನಗರದಲ್ಲಿರುವ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.