ಸುದ್ದಿ ಕಣಜ.ಕಾಂ
ಬೆಂಗಳೂರು: ಕೇಂದ್ರ ಸರ್ಕಾರದ ಜಿ.ಎಸ್.ಐ ಲ್ಯಾಂಡ್ ಸ್ಲಿಪ್ ಯೋಜನೆಯಲ್ಲಿ ರಾಜ್ಯವನ್ನು ಸೇರ್ಪಡೆಗೊಳಿಸಲು ಮನವಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಬೆಂಗಳೂರಿನಲ್ಲಿ ವರದಿ ಸ್ವೀಕರಿಸಿ ಮಾತನಾಡಿದ ಮುಖ್ಯಮಂತ್ರಿ, ಕಳೆದ ಮೂರು ವರ್ಷಗಳಲ್ಲಿ ಮಲೆನಾಡಿನಲ್ಲಿ ಭೂ ಕುಸಿತದಿಂದ ವ್ಯಾಪಕವಾಗಿ ಹಾನಿ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಜೀವವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಅಧ್ಯಕ್ಷತೆಯಲ್ಲಿ ರಾಜ್ಯ ಸರ್ಕಾರ ನೇಮಕ ಮಾಡಿದ್ದ ತಜ್ಞರ ಸಮಿತಿ ಅಂತಿಮ ವರದಿ ಸಲ್ಲಿಸಿದೆ ಎಂದರು.
READ | ಯಡಿಯೂರಪ್ಪ ವಿರುದ್ಧ ಈಶ್ವರಪ್ಪ ಹೈಕಮಾಂಡ್ ಗೆ ಲೆಟರ್, ಮಾಡಿದ 6 ಗಂಭೀರ ಆರೋಪಗಳೇನು ಗೊತ್ತಾ?
ಭಾರಿ ಭೂ ಕುಸಿತ ನೈಸರ್ಗಿಕ ವಿಪತ್ತು ವ್ಯಾಖ್ಯೆ ಅಡಿ ತರಬೇಕು | ಭಾರಿ ಭೂ ಕುಸಿತ ಪ್ರಕರಣಗಳನ್ನು ನೈಸರ್ಗಿಕ ವಿಪತ್ತು ವ್ಯಾಖ್ಯೆ ಅಡಿ ತರಬೇಕು. ಭೂ ಕುಸಿತ ನಿಯಂತ್ರಣ ಮಾರ್ಗೋಪಾಯಗಳ ಬಗ್ಗೆ ಕ್ರಿಯಾಯೋಜನೆ ರೂಪಿಸಿ, ಭೂ ಕುಸಿತ ಸಾಧ್ಯತೆ ಇರುವ ಪ್ರದೇಶಗಳ ನಕ್ಷೆ ರಚಿಸಬೇಕು ಎಂಬ ಸಲಹೆಗಳ ಜೊತೆಗೆ ವರದಿ ನೀಡಲಾಗಿದೆ ಎಂದರು.
ಭೂ ಕುಸಿತದಿಂದ ಉಂಟಾಗಿರುವ ಆಸ್ತಿ ಹಾನಿ ಮತ್ತು ಪ್ರಾಣ ಹಾನಿಗೆ ಪರಿಹಾರ ಮತ್ತು ಪುನರ್ವಸತಿ ಬಗ್ಗೆ ಸೂಕ್ತ ಸಲಹೆಗಳು ಸಹ ವರದಿಯಲ್ಲಿ ಮೂಡಿಬಂದಿವೆ ಎಂದು ಸಿಎಂ ತಿಳಿಸಿದರು.
READ | 21 ಲಕ್ಷ ರೂ.ಗೆ ಹರಾಜಾದ ಗುರು ತಿಪ್ಪೇರುದ್ರಸ್ವಾಮಿ ಬ್ರಹ್ಮ ರಥೋತ್ಸವ ಮುಕ್ತಿ ಬಾವುಟ
ಕೇಂದ್ರ ಸರ್ಕಾರ ನೀಡುವ ಮಿಟಿಗೇಷನ್ ಫಂಡ್ ಮೂಲಕ ಭೂ ಕುಸಿತ ಪ್ರದೇಶದ ಪುನರ್ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಅನುದಾನವನ್ನೂ ಮೀಸಲಿಡುವ ಬಗ್ಗೆ ಸರ್ಕಾರ ಪರಿಶೀಲಿಸುವುದು, ವರದಿಯಲ್ಲಿ ಮಾಡಲಾಗಿರುವ ಶಿಫಾರಸುಗಳ ಅನುಷ್ಠಾನಕ್ಕೆ ಸರ್ಕಾರ ಪರಿಶೀಲಿಸಿ ಕ್ರಮಕೈಗೊಳ್ಳಲಿದೆ ಎಂದು ಹೇಳಿದರು.
ಕರ್ನಾಟಕ ಜೀವವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ, ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.