ಸುದ್ದಿ ಕಣಜ.ಕಾಂ
ಶಿವಮೊಗ್ಗ: ಜಿಲ್ಲೆಯಲ್ಲಿ ಶುಕ್ರವಾರವೊಂದೇ ದಿನ ಆರು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗಲಿರುವುದು ದೃಢಪಟ್ಟಿದೆ. ಇಂದು ಒಟ್ಟು 34 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ.
1,454 ಜನರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿದ್ದು, 2,281 ವರದಿ ನೆಗೆಟಿವ್ ಬಂದಿವೆ. ಪಾಸಿಟಿವ್ ಬಂದವರಲ್ಲಿ 72 ಜನ ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, 44 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಹಾಗೂ 123 ಜನ ಹೋಮ್ ಐಸೋಲೇಷನ್ ನಲ್ಲಿದ್ದಾರೆ. 239 ಸಕ್ರಿಯ ಪ್ರಕರಣಗಳಿವೆ.
ತಾಲೂಕುವಾರು ವರದಿ | ಶಿವಮೊಗ್ಗ 9, ಭದ್ರಾವತಿ 8, ಶಿಕಾರಿಪುರ 1, ತೀರ್ಥಹಳ್ಳಿ 12, ಸೊರಬ 3, ಹೊರ ಜಿಲ್ಲೆಯ 1 ಪ್ರಕರಣ ಪತ್ತೆಯಾಗಿವೆ.