ಸುದ್ದಿ ಕಣಜ.ಕಾಂ
ಶಿವಮೊಗ್ಗ: ಏಪ್ರಿಲ್ 11ರಂದು ನಿಗದಿಯಾಗಿದ್ದ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಯನ್ನು ಮುಂದೂಡಲಾಗಿದೆ ಎಂದು ಮೈಸೂರು ವಿಶ್ವವಿದ್ಯಾಲಯದ ಕೆ-ಸೆಟ್ ಪರೀಕ್ಷಾ ಸಂಯೋಜನಾಧಿಕಾರಿ ಪ್ರೊ. ಎಚ್. ರಾಜಶೇಖರ್ ತಿಳಿಸಿದ್ದಾರೆ.
READ | ಶಿವಮೊಗ್ಗದ 10 ಪರೀಕ್ಷಾ ಕೇಂದ್ರಗಳಲ್ಲಿ ಏ.11ರಂದು ನಡೆಯಲಿದೆ ಕೆ-ಸೆಟ್ ಪರೀಕ್ಷೆ , ಪರೀಕ್ಷಾ ಕೇಂದ್ರ ಮಾಹಿತಿ ಇಲ್ಲಿದೆ
ಈ ಕುರಿತು ಪ್ರಕಟಣೆಯ ಮೂಲಕ ಕುವೆಂಪು ವಿಶ್ವವಿದ್ಯಾಲಯಕ್ಕೆ ಮಾಹಿತಿ ನೀಡಿರುವ ಅವರು ಕೆ-ಸೆಟ್ ಪರೀಕ್ಷೆಗೆ ರಾಜ್ಯಾದ್ಯಂತ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಆದರೆ, ಕಾರಣಾಂತರಗಳಿಂದ ಪರೀಕ್ಷೆಯನ್ನು ಮುಂದೂಡಲು ನಿರ್ಧರಿಸಲಾಗಿದೆ. ಮುಂದಿನ ಪರೀಕ್ಷಾ ದಿನಾಂಕವನ್ನು ಶೀಘ್ರದಲ್ಲೇ ಕೆ-ಸೆಟ್ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.
ನೊಂದಾಯಿತ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗೆ ಮತ್ತು ಮುಂದಿನ ಪರೀಕ್ಷಾ ದಿನಾಂಕದ ಬಗ್ಗೆ ತಿಳಿದುಕೊಳ್ಳಲು ಕೆ-ಸೆಟ್ ವೆಬ್ಸೈಟ್ ಅನ್ನು ಗಮನಿಸುತ್ತಿರುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.