ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮೈಸೂರು ವಿಶ್ವವಿದ್ಯಾಲಯ ನಡೆಸುವ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಏಪ್ರಿಲ್ 11ರಂದು ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯ 10 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
ಎಲ್ಲೆಲ್ಲಿ ಪರೀಕ್ಷೆ | ಸಹ್ಯಾದ್ರಿ ಕಾಲೇಜು ಆವರಣದಲ್ಲಿರುವ ಸಹ್ಯಾದ್ರಿ ಕಲಾ ಕಾಲೇಜು, ಸಹ್ಯಾದ್ರಿ ವಿಜ್ಞಾನ ಕಾಲೇಜು ಮತ್ತು ಸಹ್ಯಾದ್ರಿ ವಾಣಿಜ್ಯ ಕಾಲೇಜು ಮೊದಲ ಕ್ಲಸ್ಟರ್ನಲ್ಲಿದ್ದರೆ, ಡಿವಿಎಸ್ ಕಲೆ ಮತ್ತು ವಿಜ್ಞಾನ ಕಾಲೇಜು, ಡಿವಿಎಸ್ ಸ್ವತಂತ್ರ ಪದವಿ ಪೂರ್ವ ಕಾಲೇಜು ಮತ್ತು ಡಿವಿಎಸ್ ಸಂಯುಕ್ತ ಪಿಯು ಕಾಲೇಜು ಎರಡನೆಯ ಕ್ಲಸ್ಟರ್ನಲ್ಲಿದೆ. ಇನ್ನು ಎಸ್.ಆರ್.ಎನ್.ಎಂ.ಎನ್. ಅನ್ವಯಿಕ ವಿಜ್ಞಾನ ಕಾಲೇಜು, ಎ.ಟಿ.ಎನ್.ಸಿ.ಸಿ ಕಾಲೇಜು, ಸಿ.ಬಿ.ಆರ್. ನ್ಯಾಷನಲ್ ಕಾನೂನು ಕಾಲೇಜು ಮತ್ತು ಎಚ್.ಎಸ್.ಆರ್ ನ್ಯಾಷನಲ್ ಪಿಯು ಕಾಲೇಜುಗಳನ್ನು ಮೂರನೇ ಕ್ಲಸ್ಟರ್ಗಳಾಗಿ ವಿಂಗಡಿಸಲಾಗಿದೆ.
READ | ಶಿವಮೊಗ್ಗದ ಅಂಗಡಿಗಳಿಗೆ 1 ವರ್ಷದಲ್ಲಿ ಬಿತ್ತು 17.76 ಲಕ್ಷ ದಂಡ, ಕಾರಣವೇನು ಗೊತ್ತಾ?
ಕೋವಿಡ್ ಮಾರ್ಗಸೂಚಿ ಅನ್ವಯವಾಗುವ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿರುತ್ತದೆ ಎಂದು ಕುವೆಂಪು ವಿಶ್ವವಿದ್ಯಾಲಯದ ಕೆ-ಸೆಟ್ ಪರೀಕ್ಷಾ ಸಂಯೋಜಕ ಡಾ. ರಾಜೇಶ್ವರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಐಟಿಐ ಪರೀಕ್ಷೆಗೆ ಮೇಜರ್ ಸರ್ಜರಿ, ಪರೀಕ್ಷಾ ಪ್ರಾಧಿಕಾರ ನಡೆಸಲಿದೆ ಪರೀಕ್ಷೆ, ಕಾರಣವೇನು?