ಸುದ್ದಿ ಕಣಜ.ಕಾಂ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ.
ಈ ಬಗ್ಗೆ ತಮ್ಮ ಟ್ವೀಟರ್ ಖಾತೆಯಲ್ಲಿ ಶನಿವಾರ ಪೋಸ್ಟ್ ಮಾಡಿರುವ ಅವರು, ತಮ್ಮ ಸಂಪರ್ಕಕ್ಕೆ ಬಂದಿರುವವರು ಸಹ ಕೊರೊನಾ ಪರೀಕ್ಷೆಗೆ ಒಳಪಡುವಂತೆ ಮನವಿ ಮಾಡಿದ್ದಾರೆ. ಶೀಘ್ರ ಗುಣಮುಖರಾಗಲಿ ಎಂದು ಎಚ್.ಡಿ.ಕೆ. ಅವರ ಅಭಿಮಾನಿಗಳು, ಹಿತೈಷಿಗಳೂ ಹಾರೈಸಿದ್ದಾರೆ.