ಸುದ್ದಿ ಕಣಜ.ಕಾಂ
ಭದ್ರಾವತಿ: ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ 21 ಜನರಿಗೆ ಸೋಂಕು ತಗಲಿರುವುದರಿಂದ ಇದನ್ನು ಮೈಕ್ರೋ ಕಂಟೈನ್ಮೆಂಟ್ ಜೋನ್ ಎಂದು ಗುರುತಿಸಲಾಗಿದೆ.
READ | ಭದ್ರಾವತಿಯಲ್ಲಿ ಕೊರೊನಾ ಮಹಾಸ್ಫೋಟ, ಒಂದೇ ದಿನ 124 ಜನರಿಗೆ ಸೋಂಕು
ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕ ಹೊಂದಿರುವವರ ಸಂಖ್ಯೆ ಅಧಿಕ ಇರುವುದರಿಂದ ಗ್ರಾಮದಲ್ಲಿರುವ ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.
ಕೊರೊನಾ ಪಾಸಿಟಿವ್ ಬಂದವರಲ್ಲಿ ಯಾವುದೇ ರೋಗದ ಲಕ್ಷಣಗಳಿಲ್ಲ. ಆದರೂ ಮುಂಜಾಗೃತಾ ಕ್ರಮವಾಗಿ ಅವರನ್ನು ಭದ್ರಾವತಿ ಹಾಗೂ ಶಿವಮೊಗ್ಗದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.