ವೀಕೆಂಡ್ ಕರ್ಫ್ಯೂ ನಿಯಮ ಉಲ್ಲಂಘಿಸಿದ್ದಕ್ಕೆ 49 ಬೈಕ್ ಸೀಜ್, ವಿಧಿಸಲಾದ ದಂಡವೆಷ್ಟು ಗೊತ್ತಾ?

 

 

ಸುದ್ದಿ‌ ಕಣಜ.ಕಾಂ
ಶಿವಮೊಗ್ಗ: ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ನಿರ್ದೇಶನದ ಬಳಿಕವೂ ವೀಕೆಂಡ್ ಕರ್ಫ್ಯೂ ನಿಯಮ ಉಲ್ಲಂಘಿಸಿ ಹತ್ತು ಗಂಟೆ ಬಳಿಕ‌ ಓಡಾಡುತ್ತಿದ್ದ 49 ದ್ವಿಚಕ್ರ ವಾಹನಗಳನ್ನು ಪೊಲೀಸ್ ಇಲಾಖೆ ಭಾನುವಾರ ಸೀಜ್ ಮಾಡಿದೆ.
ಬೆಳಗ್ಗೆ 6 ರಿಂದ 10 ಗಂಟೆಯವರೆಗಷ್ಟೇ ಓಡಾಡಲು ಅವಕಾಶ ನೀಡಲಾಗಿತ್ತು. ಆದರೆ ದ್ವಿಚಕ್ರ ವಾಹನ ಸವಾರರು ನಿಯಮಕ್ಕೆ ವಿರುದ್ಧವಾಗಿ ಯಾವುದೇ ಕಾರಣವಿಲ್ಲದೇ ಓಡಾಡುತ್ತಿದ್ದರು. ಇದನ್ನು ಗಮನಿಸಿದ ಪೊಲೀಸರು ವಾಹನಗಳನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ.
ಐಎಂವಿ ಕಾಯ್ದೆ ಅಡಿಯಲ್ಲಿ ಒಟ್ಟು 172 ಪ್ರಕರಣಗಳನ್ನು ದಾಖಲಿಸಿ 82,800 ರೂಪಾಯಿ ದಂಡವನ್ನು ವಿಧಿಸಲಾಗಿದೆ.

error: Content is protected !!