ಸುದ್ದಿ ಕಣಜ.ಕಾಂ
ಶಿವಮೊಗ್ಗ: ಶಾಸಕ ಬಿ.ಕೆ.ಸಂಗಮೇಶ್ವರ್ ಅವರ ಪುತ್ರ ಬಸವೇಶ್ ಅವರಿಗೆ ಹೈಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ.
READ |ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಪುತ್ರನ ಬಂಧನ, ಕಾರಣವೇನು ಗೊತ್ತಾ?

ಏನಾಗಿತ್ತು | ಬಿಜೆಪಿ ಕಾರ್ಯಕರ್ತರು ಜೈಶ್ರೀರಾಮ್ ಘೋಷಣೆ ಕೂಗಿದ್ದಾರೆ ಎಂಬ ಕಾರಣಕ್ಕೆ ಶಾಸಕ ಸಂಗಮೇಶ್ವರ್ ಅವರ ಕಡೆಯವರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗುಂಪು ಘರ್ಷಣೆಯಾಗಿತ್ತು. ಪ್ರಕರಣ ಸಂಬಂಧ ಬಸವೇಶ್ ಸೇರಿ ಒಟ್ಟು 15 ಜನರ ಮೇಲೆ 307, ಜಾತಿ ನಿಂದನೆ ಪ್ರಕರಣ ದಾಖಲಾಗಿತ್ತು.
ಪ್ರಕರಣ ಸಂಬಂಧ ಭದ್ರಾವತಿ, ಶಿವಮೊಗ್ಗ ನ್ಯಾಯಾಲಯದಲ್ಲಿ ಜಾಮೀನಿಗೋಸ್ಕರ ಅರ್ಜಿ ಸಲ್ಲಿಸಲಾಗಿತ್ತು. ಆದರೆ, ಅವರ ಜಾಮೀನು ಅರ್ಜಿಯನ್ನು ಅರ್ಜಿ ತಿರಸ್ಕರಿಸಲಾಗಿತ್ತು. ಅದಾದ ಬಳಿಕ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.