ಕೊರೊನಾ‌ ಕಂಪ್ಲೇಂಟ್ ಗೆ ತಾಲೂಕು‌ ಮಟ್ಟದಲ್ಲಿ ಕಂಟ್ರೋಲ್ ರೂಂ, ಮತ್ತೆ ಶುರುವಾಗಲಿ ಕೋವಿಡ್ ಕೇರ್ ಸೆಂಟರ್

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಪಾರದರ್ಶಕ ವ್ಯವಸ್ಥೆ ಹಾಗೂ ಸಾರ್ವಜನಿಕರಿಂದ ನೇರವಾಗಿ ಅಹವಾಲು ಸ್ವೀಕರಿಸಲು ತಾಲೂಕು ಕೇಂದ್ರಗಳಲ್ಲಿ ಕಂಟ್ರೋಲ್ ರೂಮ್ ಆರಂಭಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೂಚನೆ ನೀಡಿದರು.

READ |ಭದ್ರಾವತಿ ನಗರ ಸಭೆ ಕಾಂಗ್ರೆಸ್ ಅಭ್ಯರ್ಥಿ ಸಾವು, ವಾರ್ಡ್ ನಂ.29 ಚುನಾವಣೆ ನಡೆಯುತ್ತಾ?

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಲ್ಲ ತಾಲೂಕು ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಮಾತನಾಡಿದ ಅವರು, ಕೋವಿಡ್ ನಿರ್ವಹಣೆ ಕುರಿತು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.

ರೂಪಾಂತರ‌ ಕರೋನಾ ಅತ್ಯಂತ ವೇಗವಾಗಿ ಹರಡುತ್ತಿದ್ದು, ಪ್ರಾಥಮಿಕ ಸೋಂಕಿತರಲ್ಲಿ ಶೇ.30ರಷ್ಟು ಮಂದಿಗೆ ಪಾಸಿಟಿವ್ ಕಂಡು ಬರುತ್ತಿದೆ.
– ಡಾ.ರಾಜೇಶ್ ಸುರಗಿಹಳ್ಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ

ಪ್ರಸ್ತುತ ಗಾಜನೂರಿನಲ್ಲಿ ಕೋವಿಡ್ ಕೇರ್ ಸೆಂಟರ್ (ಸಿಸಿಸಿ) ಸಜ್ಜುಗೊಳಿಸಲಾಗಿದೆ. ಎಲ್ಲ ತಾಲೂಕುಗಳಲ್ಲಿ ಸಿಸಿಸಿ ಸಿದ್ಧಪಡಿಸಬೇಕು. ಮನೆ ಆರೈಕೆಯಲ್ಲಿ ಇರುವ ಕೋವಿಡ್ ಪಾಸಿಟಿವ್ ವ್ಯಕ್ತಿಗಳ ಮಾಹಿತಿಯನ್ನು ಪ್ರತಿ ದಿನ ಪಡೆಯಲು ತಾಲೂಕು ಮಟ್ಟದಲ್ಲಿ ತಂಡ ರಚಿಸಬೇಕು ಎಂದು ನಿರ್ದೇಶನ ನೀಡಿದರು.
ತಾಲೂಕಿನಲ್ಲಿ ಕನಿಷ್ಠ 50 ಆಕ್ಸಿಜನ್ ಬೆಡ್ | ಪ್ರತಿ ತಾಲೂಕಿನಲ್ಲಿ ಕನಿಷ್ಠ 50 ಆಕ್ಸಿಜನ್ ಬೆಡ್ ಸೌಲಭ್ಯ ಇರಬೇಕು ಎಂದು‌ ತಿಳಿಸಿದರು.
‌ವ್ಯಾಕ್ಸಿನೇಷನ್ ಲಭ್ಯತೆ ಬಗ್ಗೆ ಪ್ರತಿ ದಿನ ಮಾಹಿತಿ ನೀಡಬೇಕು. ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಮುಂಜಾಗರೂಕತಾ ಕ್ರಮಗಳ ಮೇಲುಸ್ತುವಾರಿಗೆ ಪೊಲೀಸ್ ಇಲಾಖೆ ನೇತೃತ್ವದಲ್ಲಿ ನೋಡಲ್ ಅಧಿಕಾರಿ ನೇಮಕ ಮಾಡಲಾಗುವುದು. ಆಂಬ್ಯುಲೆನ್ಸ್ ನಿರ್ವಹಣೆಗೆ ನೋಡಲ್ ಅಧಿಕಾರಿ ನೇಮಕ ಮಾಡಬೇಕು ಎಂದು ಹೇಳಿದರು.
ಸಭೆಯಲ್ಲಿ‌ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಹೆಚ್ಚುವರಿ‌ ಎಸ್.ಪಿ. ಡಾ.ಎಚ್.ಟಿ. ಶೇಖರ್, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಸಿಮ್ಸ್ ನಿರ್ದೇಶಕ ಡಾ.ಸಿದ್ಧಪ್ಪ‌ ಉಪಸ್ಥಿತರಿದ್ದರು.

https://www.suddikanaja.com/2021/04/17/covid-high-alert-in-shivamogga/

error: Content is protected !!