ಎಪಿಎಂಸಿ ತರಕಾರಿ ಮಾರ್ಕೆಟ್ ನಲ್ಲಿ ಬಿತ್ತು 4 ಸಾವಿರ ರೂ. ದಂಡ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ನಗರದ ಎಪಿಎಂಸಿ ತರಕಾರಿ ಮಾರ್ಕೆಟ್ ನಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿದ್ದಾರೆ. ಮಾಸ್ಕ್ ಮತ್ತು ಸಾಮಾಜಿಕ ಅಂತರ ಪಾಲನೆ ಮಾಡದವರಿಗೆ ದಂಡ ವಿಧಿಸಲಾಗಿದೆ.

READ | ಖಾಸಗಿ ಬಸ್ ನಿಲ್ದಾಣದಲ್ಲಿ ರಾತ್ರೋರಾತ್ರಿ ಮಳಿಗೆ ನಿರ್ಮಾಣ, ಕಿತ್ತೊಗೆದ ಪಾಲಿಕೆ, ಒತ್ತುವರಿದಾರರ ಮೇಲೆ ಬೀಳಲಿದೆ ಕೇಸ್

ಸಾಕಷ್ಟು ತಿಳಿವಳಿಕೆ ನೀಡಿದ ನಂತರವೂ ವ್ಯಾಪಾರಿಗಳು ಮತ್ತು ಸಾರ್ವಜನಿಕರಿಗೆ ಮಾಸ್ಕ್ ಧರಿಸದೇ ಮಾರ್ಕೆಟ್ ಗೆ ಬಂದಿದ್ದರು. ಈ ಬಗ್ಗೆ ಎಚ್ಚರಿಕೆ ನೀಡಿದರೂ ಯಾರೂ ತಲೆ ಕೆಡಿಸಿಕೊಳ್ಳಲಿಲ್ಲ. ನಂತರ, ಒಟ್ಟು 16 ಜನರ ಮೇಲೆ ಪ್ರಕರಣ ದಾಖಲಿಸಿ 4 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ.

error: Content is protected !!