ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನ ಸಾಮಾನ್ಯರು ನ್ಯಾಯಾಲಯದ ಮೊರೆ ಹೋಗಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಕಷ್ಟಕರವಾಗುವುದರಿಂದ ಹೆಲ್ಪ್ ಲೈನ್ ವ್ಯವಸ್ಥೆ ಮಾಡಲಾಗಿದೆ.
READ | ಏ.28ರಿಂದ ಅಂಚೆ ಕಚೇರಿ ಹಾಫ್ ಡೇ ಮಾತ್ರ, ಬದಲಾದ ಸಮಯ ಇಲ್ಲಿದೆ
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಸಹಾಯ ವಾಣಿ 180042590900 ಹಾಗೂ ಶಿವಮೊಗ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾನೂನು ಸೇವೆಗಳ ಸಹಾಯವಾಣಿ ಸಂಖ್ಯೆ 9482269030 ಮತ್ತು 9141020249 ಗಳನ್ನು ಜಾರಿಗೆ ತಂದಿವೆ.
ಸಾರ್ವಜನರಿಕರು ತಮ್ಮ ಕಾನೂನಾತ್ಮಕ ಸಮಸ್ಯೆಗಳಿಗೆ ಈ ಸಹಾಯವಾಣಿ ಸಂಖ್ಯೆಗಳ ಸದುಪಯೋಗ ಪಡೆದುಕೊಳ್ಳುವಂತೆ ನ್ಯಾಯಾಧೀಶರಾದ ಕೆ.ಎನ್.ಸರಸ್ವತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.