ವಾರಾಂತ್ಯ ಲಾಕ್ ಡೌನ್ ಹಿನ್ನೆಲೆ ಕೆ.ಪಿ.ಎಸ್.ಸಿ ಇಲಾಖಾ ಪರೀಕ್ಷೆ ಮುಂದೂಡಿಕೆ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕರ್ನಾಟಕ ಲೋಕ ಸೇವಾ ಆಯೋಗವು ಏಪ್ರಿಲ್ 22 ರಿಂದ 30ರ ವರೆಗೆ ನಿಗದಿಪಡಿಸಿದ್ದ 2020ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳನ್ನು (ಕೆಪಿಎಸ್‍ಸಿ) ಮುಂದೂಡಲಾಗಿದೆ.

READ | ಕೋವಿಡ್ ಹೊಸ ಮಾರ್ಗಸೂಚಿ‌ ಅನ್ವಯ ಕುವೆಂಪು ವಿಶ್ವವಿದ್ಯಾಲಯ ಎಲ್ಲ ಪರೀಕ್ಷೆಗಳು ಮುಂದೂಡಿಕೆ

ಕೋವಿಡ್ 19ರ ಸಾಂಕ್ರಾಮಿಕ ರೋಗಾಣು ಹರಡುವುದನ್ನು ತಡೆಗಟ್ಟಲು ಸರ್ಕಾರ ವಿಧಿಸಿರುವ ರಾತ್ರಿ ಮತ್ತು ವಾರಾಂತ್ಯದ ಕರ್ಫ್ಯೂ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಮೂಂದೂಡಿದ್ದು, ಮುಂದಿನ ಪರೀಕ್ಷಾ ದಿನಾಂಕಗಳನ್ನು ನಂತರದ ದಿನಗಳಲ್ಲಿ ಆಯೋಗದ ಅಂತರ್ಜಾಲ http://kpsc/kar.nic.in ರಲ್ಲಿ ಪ್ರಕಟಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!