ಯುವತಿಯ ಅಶ್ಲೀಲ ಫೋಟೊ ಹಾಕಿ ಲೈಂಗಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿ ಅರೆಸ್ಟ್

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಯುವತಿಯ ಹೆಸರಿನಲ್ಲಿ ನಕಲಿ ಇನ್ ಸ್ಟಾ ಗ್ರಾಂ ಖಾತೆ ತೆರೆದು ಅಶ್ಲೀಲ ಫೋಟೊಗಳನ್ನು ಹಾಕಿ, ಯುವತಿಗೆ ಮಾನಸಿಕ ಹಾಗೂ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆಂಧ್ರಪ್ರದೇಶದ ರೇಣುಗುಂಟ ನಿವಾಸಿ ಬಷೀರ್(26) ಎಂಬಾತನ್ನು ಬಂಧಿಸಲಾಗಿದೆ. ಆತನಿಂದ ಎರಡು ಮೊಬೈಲ್ ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಖಾತೆಯನ್ನು ಸೃಷ್ಟಿಸಿ ಕಿರುಕುಳ ನೀಡುತ್ತಿರುವ ಬಗ್ಗೆ ಯುವತಿಯು ಸಿಇಎನ್ ಪೊಲೀಸ್ ಠಾಣೆಯಲ್ಲಿ ಕಲಂ 66(ಸಿ), 66(ಡಿ) ಐಟಿ ಕಾಯ್ದೆ ಮತ್ತು 354 (ಎ), 354(ಡಿ), 419, 506 ಐಪಿಸಿ ಅಡಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

error: Content is protected !!