ಸುದ್ದಿ ಕಣಜ.ಕಾಂ
ಶಿವಮೊಗ್ಗ: 18 ರಿಂದ 44 ವರ್ಷದ ಫಲಾನುಭವಿಗಳಿಗೆ ಮೇ 1 ರಿಂದ ಲಸಿಕೆ ನೀಡಲಾಗುವುದಿಲ್ಲ ಎಂದು ಡಿ.ಎಚ್.ಒ ಡಾ.ರಾಜೇಶ್ ಸುರಗಿಹಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸರ್ಕಾರದ ಮಾರ್ಗಸೂಚಿ ಬಂದ ನಂತರ ಮುಂದಿನ ದಿನಗಳಲ್ಲಿ ಲಸಿಕೆ ನೀಡುವ ದಿನಾಂಕವನ್ನು ತಿಳಿಸಲಾಗುವುದು ಎಂದು ಹೇಳಿದ್ದಾರೆ.
READ | ಕೊರೊನಾ ಹೈ ಅಲರ್ಟ್, ಮೆಗ್ಗಾನ್ ಆಸ್ಪತ್ರೆಯ ವಾರ್ಡ್ ಗಳಲ್ಲಿ ವೈದ್ಯರ ಹೆಸರು ಪ್ರಕಟ, ಕರ್ತವ್ಯ ಲೋಪ ಎಸಗಿದರೆ ಕ್ರಮ
ಮೇ 1 ರಿಂದ ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ 45 ವರ್ಷ ಮೇಲ್ಪಟ್ಟ ನಾಗರಿಕರಿಗೆ ಕೊರೊನಾ ಲಸಿಕೆ ನೀಡಲಾಗುವುದು. ಆದರೆ, ಇದಕ್ಕಾಗಿ ಆನ್ಲೈನ್ ನಲ್ಲಿ ಹೆಸರು ನೋಂದಣಿ ಮಾಡಿಕೊಳ್ಳುವುದು ಕಡ್ಡಾಯ ಎಂದು ತಿಳಿಸಿದ್ದಾರೆ.
ನೋಂದಣಿ ಹೇಗೆ, ಎಲ್ಲಿ | ಕೋವಿನ್ ಆ್ಯಪ್ ಅಥವಾ ಆರೋಗ್ಯ ಸೇತು ಆ್ಯಪ್ ಮೂಲಕ ಆನ್ಲೈನ್ ನೋಂದಣಿ ಮಾಡಿಕೊಂಡು ಲಸಿಕೆ ಪಡೆಯಬಹುದು. ಸಾರ್ವಜನಿಕರು ಕೋವಿಡ್ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಿ ಲಸಿಕೆ ಪಡೆಯುವಂತೆ ಮನವಿ ಮಾಡಿದ್ದಾರೆ.