ಸರ್ಕಾರಿ ನೌಕರರ ಒಂದು ತಿಂಗಳ ವೇತನ ಕಡಿತದ ಬಗ್ಗೆ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಹೇಳಿದ್ದೇನು?

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕೋವಿಡ್ ಹಿನ್ನೆಲೆ ಸರ್ಕಾರಿ ನೌಕರರ ಒಂದು ತಿಂಗಳ ವೇತನ ಕಡಿತದ ಬಗ್ಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಸ್ಪಷನೆ ನೀಡಿದ್ದಾರೆ.

READ | ನವೋದಯ ಪ್ರವೇಶ ಪರೀಕ್ಷೆ ಮುಂದೂಡಿಕೆ

CS Shadakshari
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಚಿವ ಸಂಪುಟ ಸಭೆ ನಡೆಸಿ 14 ದಿನಗಳ ಕಟ್ಟುನಿಟ್ಟಿನ ಮಾರ್ಗಸೂಚಿಯ ಬಗ್ಗೆ ಮಾಹಿತಿ ನೀಡಿದ್ದೇ ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರಿ ನೌಕರರ ವೇತನ ಕಡಿತ ಬಗ್ಗೆ ಮಾಹಿತಿ ಹರಿದಾಡಿತ್ತು. ಅದಕ್ಕೆ ಸಾಮಾಜಿಕ ಜಾಲತಾಣದಲ್ಲೂ ವಿರೋಧ ವ್ಯಕ್ತವಾಗಿತ್ತು.

ಷಡಕ್ಷರಿ ಹೇಳಿದ್ದೇನು | ಸಾಮಾಜಿಕ ಜಾಲತಾಣದಲ್ಲಿ ರಾಜ್ಯ ಸರ್ಕಾರಿ ನೌಕರರ ಒಂದು ತಿಂಗಳ ವೇತನ ಕಟಾವು ಮಾಡುತ್ತೇವೆ ಎಂಬ ಅಂಶ ಸತ್ಯಕ್ಕೆ ದೂರವಾದದ್ದು. ಗಾಳಿ ಸುದ್ದಿಯಾಗಿದೆ. ಯಾವುದೇ ಕಾರಣಕ್ಕೂ ಸರ್ಕಾರಿ ನೌಕರರು ಗೊಂದಲಕ್ಕೆ ಒಳಗಾಗಬೇಡಿ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!