ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿ ಜಿಲ್ಲೆಯಾದ್ಯಂತ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸಲಾಗಿದೆ.
READ | ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಎರಡನೇ ಸಲ ಕೊರೊನಾ ಪಾಸಿಟಿವ್, ಆಸ್ಪತ್ರೆಗೆ ದಾಖಲು
ಶಿವಮೊಗ್ಗದಲ್ಲಿ ಅಭಿಮಾನಿಗಳು, ಕಾರ್ಯಕರ್ತರು ನಗರದ ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಿಜೆಪಿ ನಗರ ಅಧ್ಯಕ್ಷ ಜಗದೀಶ್, ಪ್ರಮುಖರಾದ ಅಣ್ಣಪ್ಪ, ಮಾಲತೇಶ್, ಸುರೇಖಾ ಮುರುಳೀಧರ್ ಉಪಸ್ಥಿತರಿದ್ದರು.