ವಿಟಿಯು ಪರೀಕ್ಷೆ ಮುಂದೂಡಿಕೆ ಇಲ್ಲ, ವೇಳಾಪಟ್ಟಿಯಂತೆಯೇ ನಡೆಯಲಿವೆ ಪರೀಕ್ಷೆ

 

 

ಸುದ್ದಿ ಕಣಜ.ಕಾಂ
VTU EXAMS PRESS NOTEಶಿವಮೊಗ್ಗ: ಕೋವಿಡ್ ಗಂಡಾಂತರ ಮಧ್ಯೆ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳು ಪರೀಕ್ಷೆಗಳನ್ನು ಮುಂದೂಡಿವೆ. ಆದರೆ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಮಾತ್ರ ವೇಳಾಪಟ್ಟಿಯಂತೆಯೇ ಪರೀಕ್ಷೆಗಳನ್ನು ನಡೆಸುವುದಾಗಿ ತಿಳಿಸಿದೆ.

READ | ಕೋವಿಡ್ ಹೊಸ ಮಾರ್ಗಸೂಚಿ‌ ಅನ್ವಯ ಕುವೆಂಪು ವಿಶ್ವವಿದ್ಯಾಲಯ ಎಲ್ಲ ಪರೀಕ್ಷೆಗಳು ಮುಂದೂಡಿಕೆ

ಈ ಬಗ್ಗೆ ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆಗೊಳಿಸಿರುವ ವಿಶ್ವವಿದ್ಯಾಲಯದ ಕುಲಸಚಿವರು, ಮೇ 19ರಿಂದ ಎರಡನೇ ಸೆಮಿಸ್ಟರ್ ಆರಂಭವಾಗಲಿದ್ದು, ಪ್ರಥಮ ಸೆಮಿಸ್ಟರ್ ಪರೀಕ್ಷೆಯನ್ನು ಮುಂದೂಡಲಾಗುವುದಿಲ್ಲ ಎಂದು ತಿಳಿಸಿದ್ದಾರೆ.
ಒಂದುವೇಳೆ, ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರು ಆಗದಿದ್ದರೆ ಎರಡನೇ ಸೆಮಿಸ್ಟರ್ ಗೆ ಪ್ರವೇಶ ನೀಡಲಾಗುವುದು. ಆದರೆ, 2ನೇ ಸೆಮ್ ಪರೀಕ್ಷೆ ವೇಳೆಯೇ ಮೊದಲನೆಯದ್ದನ್ನು ಬರೆಯಲು ಅವಕಾಶ ಕಲ್ಪಿಸಲಾಗುವುದು. ಹಾಗೂ ಅಂತಹ ವಿದ್ಯಾರ್ಥಿಗಳನ್ನು ಫ್ರೆಶರ್ಸ್ ಎಂದು ಪರಿಗಣಿಸಲಾಗುವುದು ಎಂದು ಹೇಳಿದ್ದಾರೆ.
ಈಗಾಗಲೇ ಪ್ರಥಮ ಸೆಮಿಸ್ಟರ್ ನ ಎರಡು ವಿಷಯಗಳಿಗೆ ಪರೀಕ್ಷೆ ಮಾಡಲಾಗಿದೆ. ಅದರಲ್ಲಿ ಶೇ.98 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಇನ್ನುಳಿದ ನಾಲ್ಕು ವಿಷಯಗಳಿಗೆ ಪರೀಕ್ಷೆಗಳನ್ನು ಸರ್ಕಾರದ ಮಾರ್ಗಸೂಚಿಯನ್ವಯ ನಡೆಸಲಾಗುವುದು. ಒಂದುವೇಳೆ, ಪರೀಕ್ಷೆ ನಡೆಸುವುದು ವಿಳಂಬವಾದ್ದಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ವ್ಯತಿರಿಕ್ತ ಪರಿಣಾಮವಾಗುವ ಸಾಧ್ಯತೆ ಇರುವುದನ್ನು ಮನಗಂಡು ಪರೀಕ್ಷೆ ನಡೆಸಲಾಗುತ್ತಿದೆ.
ಕೊರೊನಾ ಲಕ್ಷಣಗಳಿದ್ದಲ್ಲಿ ಅಂತಹ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

https://www.suddikanaja.com/2021/01/29/not-to-be-confused-with-the-term-of-service-retirement-said-cs-shadakshari/

error: Content is protected !!