ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕೋವಿಡ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಜಿಲ್ಲೆಯ ಹೋಬಳಿ ಮಟ್ಟದಲ್ಲಿರುವ ರೈತ ಸಂಪರ್ಕ ಕೇಂದ್ರಗಳು ಬೆಳಗ್ಗೆ 6ರಿಂದ 10 ಗಂಟೆಯವರೆಗೆ ಮಾತ್ರ ಕಾರ್ಯ ನಿರ್ವಹಣೆ ಮಾಡಲಿವೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ಕಿರಣ್ ಕುಮಾರ್ ತಿಳಿಸಿದ್ದಾರೆ.
READ | ಹೊರಗೆ ಬಂದರೆ ಬೈಕ್ ಸೀಜ್ ಪಕ್ಕಾ, ಎಲ್ಲ ಸರ್ಕಲ್ ಗಳು ಕ್ಲೋಸ್, ಖಾಕಿ ಸರ್ಪಗಾವಲಲ್ಲಿ ಹೇಗಿದೆ ಮೊದಲ ದಿನದ ಲಾಕ್ ಡೌನ್?
ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡುವ, ಕೃಷಿ ಪರಿಕರಗಳನ್ನು ಖರೀದಿಸುವ ಮತ್ತು ಇಲಾಖೆಯ ಇತರ ಸವಲತ್ತುಗಳನ್ನು ಪಡೆಯುವ ರೈತರು ಈ ಸಮಯದಲ್ಲಿ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಬಹುದು ಎಂದು ಅವರು ಹೇಳಿದ್ದಾರೆ.
ಇಲಾಖೆಯಿಂದ ಅಧಿಕೃತ ಪರವಾನಗಿ ಪಡೆದು ರಸಗೊಬ್ಬರ, ಬೀಜ ಮತ್ತು ಕೀಟನಾಶಕ ಮಾರಾಟ ಮಳಿಗೆಗಳು ಸದರಿ ಅವಧಿಯಲ್ಲಿ ಕಾರ್ಯ ನಿರ್ವಹಿಸಲು ಅವಕಾಶ ಕಲ್ಪಿಸಲಾಗಿದೆ. ಆದರೆ ಕೋವಿಡ್ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಿದ್ದಾರೆ.