ಸುದ್ದಿ ಕಣಜ.ಕಾಂ
ಶಿವಮೊಗ್ಗ: ರೆಮಿಡಿಸಿವಿರ್ ಇಂಜೆಕ್ಷನ್ ಕಾಳ ಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಯಲು ಎಸ್ಪಿ ನೇತೃತ್ವದಲ್ಲಿ ತಂಡಗಳನ್ನು ರಚಿಸಲಾಗಿದೆ. ಅಂತಹ ಪ್ರಕರಣಗಳಲ್ಲಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಎಚ್ಚರಿಕೆ ನೀಡಿದರು.
ಭದ್ರಾವತಿಯಲ್ಲಿ ಬಿಪಿಎಲ್ ಕಾರ್ಡ್ ಹಿಂದಿರುಗಿಸಲು ಡೆಡ್ ಲೈನ್, ಕಾರ್ಡ್ ವಾಪಸ್ ಮಾಡದಿದ್ದರೆ ಕ್ರಿಮಿನಲ್ ಕೇಸ್
ಮಾಧ್ಯಮಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ್ರಸ್ತುತ ಸರ್ಕಾರಿ ಆಸ್ಪತ್ರೆಯಲ್ಲಿ 172 ಹಾಗೂ ಖಾಸಗಿ ಆಸ್ಪತ್ರೆಯಲ್ಲಿ 306 ರೆಮಿಡಿಸಿವಿರ್ ಇಂಜೆಕ್ಷನ್ ಲಭ್ಯವಿದೆ. ಸದರಿ ಇಂಜೆಕ್ಷನ್ ಕಾಳಸಂತೆಯಲ್ಲಿ ಮಾರಾಟವಾಗದಂತೆ ಸೂಚಿಸಿದರು.
ಸ್ಟಿಂಗ್ ಆಪರೇಷನ್ | ಕಾಳಸಂತೆಯಲ್ಲಿ ಮಾರಾಟ ಪತ್ತೆ ಹಚ್ಚಲು ಸ್ಟಿಂಗ್ ಆಪರೇಷನ್ ಸಹ ನಡೆಸಲಾಗುತ್ತಿದೆ.
ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ. ಇದು ಸಮಾಧಾನವೇ ಹೊರತು ತೃಪ್ತಿ ತಂದಿಲ್ಲ. ಕಳೆದ ವಾರಕ್ಕೆ ಹೋಲಿಸಿದರೆ ಈ ಎರಡು ಮೂರು ದಿನಗಳಿಂದ 1 ಸಾವಿರ ದಾಟುತ್ತಿದ್ದ ಕೊರೊನಾ ಸೋಂಕಿತರ ಸಂಖ್ಯೆ 1 ಸಾವಿರದ ಒಳಗೆ ಬರುತ್ತಿದೆ. ಇದು ಕೊಂಚ ಸಮಾಧಾನ ತಂದಿದೆ ಎಂದರು.
ಸೋಂಕಿತರ ಪ್ರಮಾಣ ಶೇ.37 | ಶೇ.45 ರಿಂದ 47ರಷ್ಟು ಇದ್ದ ಸೋಂಕಿತರ ಪ್ರಮಾಣ ಶೇ.37ರಷ್ಟು ಬಂದಿದೆ. ಈ ಶೇ.37ರಷ್ಟು ಇದ್ದರೂ ಸ್ವಲ್ಪ ಹೆಚ್ಚಾಗಿದೆ. ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ಇಲ್ಲ. ರೋಗಿಗಳ ದಾಖಲಾತಿ ಹಾಗೂ ಅವರ ಆರೋಗ್ಯ ಸ್ಥಿತಿ ನೋಡಿಕೊಂಡು ಬೆಡ್ ಹಂಚಿಕೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಈಗ 72 ಆಕ್ಸಿಜನ್ ಬೆಡ್ ಖಾಲಿ ಇವೆ. ಸಿಬ್ಬಂದಿ ಕೊರತೆ ಆಗದಂತೆ ನೋಡಿಕೊಳ್ಳುತ್ತಿದ್ದೇವೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ 7277 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಮೆಗ್ಗಾನ್ ಆಸ್ಪತ್ರೆಯಲ್ಲಿ 600, ತಾಲ್ಲೂಕು ಆಸ್ಪತ್ರೆಗಳಲ್ಲಿ 356, ಕೋವಿಡ್ ಸೆಂಟರ್ನಲ್ಲಿ 325 ಸೋಂಕಿತರಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿ 508 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಮನೆಯಲ್ಲಿ 4,835 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.
ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಲಾಗುತ್ತಿದೆ. ಐಸೋಲೇಷನ್ ಟೀಮ್ ಮೂಲಕ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ದೂರವಾಣಿ ಮೂಲಕವೇ ವಿಚಾರಿಸಲಾಗುತ್ತಿದೆ. ಅಲ್ಲದೇ, ಖಾಸಗಿಯಾಗಿ ವೈದ್ಯರು ಮನೆಗಳಿಗೂ ಭೇಟಿ ನೀಡುತ್ತಿದ್ದಾರೆ ಎಂದರು.
ಕಳೆದ ಕೆಲವು ದಿನಗಳಿಗೆ ಹೋಲಿಸಿದರೆ ಸಾವಿನ ಸಂಖ್ಯೆ ಕೂಡ ಕಡಿಮೆಯಾಗಿದೆ. ನಿನ್ನೆಯ ಅಂಕಿ ಅಂಶದ ಪ್ರಕಾರ, 5 ಮಂದಿ ಸೋಂಕಿತರು ಮೃತಪಟ್ಟಿದ್ದು, ಇದುವರೆಗೂ 557 ಸೋಂಕಿತರು ಮರಣಹೊಂದಿದ್ದಾರೆ. ಜಿಲ್ಲಾಡಳಿತ ಅಗತ್ಯ ಎಚ್ಚರಿಕೆ ಕ್ರಮ ಅನುಸರಿಸುತ್ತಿದೆ ಎಂದರು.
ಸರ್ಕಾರಿ ಆಸ್ಪತ್ರೆಯಲ್ಲಿ 122, ಖಾಸಗಿ ಆಸ್ಪತ್ರೆಗಳಲ್ಲಿ 306 ರೆಮ್ಡೆಸಿವಿರ್ ಇದೆ. ತಾಲೂಕು ಆಸ್ಪತ್ರೆಗಳಲ್ಲಿ 104 ವೆಂಟಿಲೇಟರ್ಗಳಿವೆ. ಶಿರಾಳಕೊಪ್ಪ, ಸಾಗರ ಮತ್ತು ಹೊಸನಗರದಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಲಾಗಿದೆ ಎಂದರು.