ಶಿವಮೊಗ್ಗ ಜಿಲ್ಲೆಯಲ್ಲಿ 26 ಬ್ಲ್ಯಾಕ್ ಫಂಗಸ್ ಪ್ರಕರಣ, ಕೊರೊನಾ ಸೋಂಕಿತರಲ್ಲಿ ಆತಂಕ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಜಿಲ್ಲೆಯಲ್ಲಿ ಒಟ್ಟು 26 ಸಕ್ರಿಯ ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಹೇಳಿದರು.

READ | ಒಂದು ವಾರ ಬ್ಯಾಂಕ್ ಸೇರಿ ಎಲ್ಲವೂ ಸಂಪೂರ್ಣ ಬಂದ್, ಏನಿರುತ್ತೆ, ಏನಿರಲ್ಲ?

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ನೀರನ್ನು ಸರಿಯಾಗಿ ಕುದಿಸಿ ಆರಿಸಿ ಕುಡಿಯುವುದು ಸೇರಿದಂತೆ ಅಗತ್ಯ ಮುಂಜಾಗರೂಕತಾ ಕ್ರಮಗಳನ್ನು ಜನರು ಅನುಸರಿಸಬೇಕು ಎಂದು ಸಲಹೆ ನೀಡಿದರು.
ಸೋಂಕು ತಗ್ಗಿಸಲು ಲಾಕ್ | ಕಳೆದ 7 ದಿನಗಳಿಂದ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗುತ್ತಿವೆ. ನಿರೀಕ್ಷಿತ ಪ್ರಮಾಣದಲ್ಲಿ ಕೋವಿಡ್ ಪ್ರಕರಣಗಳನ್ನು ತಗ್ಗಿಸುವ ಉದ್ದೇಶದಿಂದ ಮೇ 31ರಿಂದ ಜೂನ್ 7ರ ವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಲಾಗಿದೆ. ಎಲ್ಲರೂ ಸಹಕರಿಸಬೇಕು ಎಂದು ಹೇಳಿದರು.

error: Content is protected !!