ಸುದ್ದಿ ಕಣಜ.ಕಾಂ
ಶಿವಮೊಗ್ಗ: ಜಿಲ್ಲೆಯಲ್ಲಿ ಇದುವರೆಗೆ 20,591 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಇದರಲ್ಲಿ ಶೇ.54ರಷ್ಟು ಅಂದರೆ 11,290 ಪ್ರಕರಣಗಳು ಗ್ರಾಮೀಣ ಭಾಗದಲ್ಲಿ ವರದಿಯಾಗಿವೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ ಹೇಳಿದರು.
READ | ತೀರ್ಥಹಳ್ಳಿಗೆ ಸಿಎಂ ಯಡಿಯೂರಪ್ಪ ನೀಡಿದ ಕೊರೊನಾ ಟಾರ್ಗೆಟ್ ಏನು?
ಮುಖ್ಯಮಂತ್ರಿ ಅವರೊಂದಿಗೆ ಬುಧವಾರ ನಡೆದ ವಿಡಿಯೋ ಸಂವಾದದಲ್ಲಿ ಮಾತನಾಡಿದ ಅವರು, ಪ್ರಸ್ತುತ 6,900 ಸಕ್ರಿಯ ಪ್ರಕರಣಗಳು ಇದ್ದು, 3,800 ಪ್ರಕರಣಗಳು ಗ್ರಾಮೀಣ ಭಾಗದಲ್ಲಿವೆ. ಆದರೆ, ಕಳೆದ ನಾಲ್ಕು ದಿನಗಳಿಂದ ಪ್ರಕರಣಗಳಲ್ಲಿ ಇಳಿಕೆ ಕಂಡು ಬಂದಿದ್ದು, ಗ್ರಾಮೀಣ ಭಾಗದಲ್ಲಿ ಪಾಸಿಟಿವಿಟಿ ದರ ಶೇ.31ರಷ್ಟಿದೆ ಎಂದರು.