ಆರೋಗ್ಯವಂತ ಮಗುವಿಗೆ ಜನ್ಮ ನೀಡಿದ ಕೊರೊನಾ ಸೋಂಕಿತ ಮಹಿಳೆ

 

 

ಸುದ್ದಿ‌ ಕಣಜ.ಕಾಂ
ಹೊಸನಗರ: ಕೊರೊನಾ ಸೋಂಕಿಗೆ ಗುರಿಯಾಗಿದ್ದ ಮಹಿಳೆಯೊಬ್ಬರು ಆರೋಗ್ಯವಂತ ಮಗುವಿಗೆ ಜನ್ಮ ನೀಡಿದ್ದು, ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ.
corona b positiveತಾಲೂಕಿನ ಸಂಪೆಕಟ್ಟೆ ಗ್ರಾಮದ ಮಹಿಳೆಯೊಬ್ಬರು ಸಾರ್ವಜನಿಕ‌ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ. ಡಾ. ಲಿಂಗರಾಜ್ ನೇತೃತ್ವದ ತಂಡ ಹೆರಿಗೆ ಮಾಡಿಸಿ, ಗಮನ ಸೆಳೆದಿದ್ದಾರೆ.

READ | ಒಂದೇ ನಾಡಕಚೇರಿಯಲ್ಲಿ ಏಳು ಮಂದಿಗೆ ಕೊರೊನಾ ಪಾಸಿಟಿವ್, ಭುಗಿಲೆದ್ದ ಆತಂಕ

ಆಗಿದ್ದೇನು | ಪ್ರಸವ ದಿನ ಹತ್ತಿರವಾಗುತ್ತಿರುವಾಗಲೇ ಮಹಿಳೆಯಲ್ಲಿ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿವೆ. ತಕ್ಷಣ, ಗಂಟಲು ದ್ರವದ ಮಾದರಿಯನ್ನು ಪಡೆದ ಪರೀಕ್ಷೆಗೆ ಒಳಪಡಿಸಿದ್ದು ಸೋಂಕು ತಗುಲಿರುವುದು ದೃಢಪಟ್ಟಿದೆ. ನಂತರ, ಆರೋಗ್ಯ ಕೇಂದ್ರದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗಿದೆ. ಹೆರಿಗೆ ನೋವು ಕಾಣಿಸಿಕೊಂಡಿದ್ದೇ ಆಸ್ಪತ್ರೆಗೆ ದಾಖಲಿಸಲಾಗಿದೆ.

error: Content is protected !!