ಸುದ್ದಿ ಕಣಜ.ಕಾಂ
ಹೊಸನಗರ: ಕೊರೊನಾ ಸೋಂಕಿಗೆ ಗುರಿಯಾಗಿದ್ದ ಮಹಿಳೆಯೊಬ್ಬರು ಆರೋಗ್ಯವಂತ ಮಗುವಿಗೆ ಜನ್ಮ ನೀಡಿದ್ದು, ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ.
ತಾಲೂಕಿನ ಸಂಪೆಕಟ್ಟೆ ಗ್ರಾಮದ ಮಹಿಳೆಯೊಬ್ಬರು ಸಾರ್ವಜನಿಕ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ. ಡಾ. ಲಿಂಗರಾಜ್ ನೇತೃತ್ವದ ತಂಡ ಹೆರಿಗೆ ಮಾಡಿಸಿ, ಗಮನ ಸೆಳೆದಿದ್ದಾರೆ.
READ | ಒಂದೇ ನಾಡಕಚೇರಿಯಲ್ಲಿ ಏಳು ಮಂದಿಗೆ ಕೊರೊನಾ ಪಾಸಿಟಿವ್, ಭುಗಿಲೆದ್ದ ಆತಂಕ
ಆಗಿದ್ದೇನು | ಪ್ರಸವ ದಿನ ಹತ್ತಿರವಾಗುತ್ತಿರುವಾಗಲೇ ಮಹಿಳೆಯಲ್ಲಿ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿವೆ. ತಕ್ಷಣ, ಗಂಟಲು ದ್ರವದ ಮಾದರಿಯನ್ನು ಪಡೆದ ಪರೀಕ್ಷೆಗೆ ಒಳಪಡಿಸಿದ್ದು ಸೋಂಕು ತಗುಲಿರುವುದು ದೃಢಪಟ್ಟಿದೆ. ನಂತರ, ಆರೋಗ್ಯ ಕೇಂದ್ರದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗಿದೆ. ಹೆರಿಗೆ ನೋವು ಕಾಣಿಸಿಕೊಂಡಿದ್ದೇ ಆಸ್ಪತ್ರೆಗೆ ದಾಖಲಿಸಲಾಗಿದೆ.