ಸುದ್ದಿ ಕಣಜ.ಕಾಂ
ಶಿವಮೊಗ್ಗ: ಈಗಾಗಲೇ ಕೋವಿಶೀಲ್ಡ್ ಲಸಿಕೆಯ ಮೊದಲ ಡೋಸ್ ಪಡೆದವರಿಗೆ ಎರಡನೇ ಡೋಸ್ ಪಡೆಯುವ ಅಂತರವನ್ನು ಸರ್ಕಾರ ಪರಿಷ್ಕರಿಸಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ ತಿಳಿಸಿದ್ದಾರೆ.
READ | ಉದ್ಘಾಟನೆಗೊಳ್ಳಲಿದೆ 100 ಹಾಸಿಗೆಯ ಕೋವಿಡ್ ಚಿಕಿತ್ಸಾ ಘಟಕ, ಏನೇನು ಸೌಲಭ್ಯ ಲಭ್ಯ
ಮೊದಲ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆದ ನಂತರ 12ರಿಂದ 14 ವಾರಗಳ ಅಂತರದಲ್ಲಿ ಎರಡನೇ ಡೋಸ್ ಪಡೆಯುವಂತೆ ಲಸಿಕಾಕರಣದ ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪು (ಎನ್ಟಿಎಜಿಐ) ಮತ್ತು ರಾಷ್ಟ್ರೀಯ ಪರಿಣಿತಿ ಗುಂಪು (ಎನ್ಇಜಿವಿಎಸಿ) ಶಿಫಾರಸ್ಸಿನ ಆಧಾರದ ಮೇಲೆ ಸರ್ಕಾರ ತಿಳಿಸಿದೆ. ಎರಡು ಡೋಸ್ಗಳ ನಡುವಿನ ಈ ಪರಿಷ್ಕೃತ ಸಮಯದ ಅಂತರ ಕೋವಿಶೀಲ್ಡ್ ಲಸಿಕೆಗೆ ಮಾತ್ರ ಅನ್ವಯಿಸುತ್ತದೆ. ಕೋವ್ಯಾಕ್ಸಿನ್ಗೆ ಅನ್ವಯಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.