ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕೋವಿಡ್ 19 ಸೋಂಕು ನಿವಾರಣೆಯಲ್ಲಿ ಕ್ಷೇತ್ರ ಹಾಗೂ ಸಮುದಾಯ ಹಂತಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆರೋಗ್ಯ ಸಹಾಯಕರು ಸೇರಿದಂತೆ ಇತರೆ ಇಲಾಖೆಗಳ ಸಿಬ್ಬಂದಿಗಳಿಗೆ ಸುರಕ್ಷತಾ ಕಿಟ್ ವಿತರಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.
https://www.suddikanaja.com/2021/05/18/ambulance-will-seize-if-they-charge-heavy-amount-to-transport-died-body/
ಈ ಸಂಬಂಧ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಯಡಿಯೂರಪ್ಪ ಅವರಿಗೆ ಮನವಿ ನೀಡಿ, ಸರ್ಕಾರವು ಸೋಂಕು ನಿವಾರಣೆಗೆ ಕೈಗೊಳ್ಳುತ್ತಿರುವ ಕ್ರಮಗಳ ಅನುಷ್ಠಾನದಲ್ಲಿ ರಾಜ್ಯ ಸರ್ಕಾರಿ ನೌಕರರು ಅದರಲ್ಲೂ ವಿಶೇಷವಾಗಿ ಪೊಲೀಸ್, ಆರೋಗ್ಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಶಿಕ್ಷಣ ಇಲಾಖೆ ಸೇರಿದಂತೆ ಹಲವು ಇಲಾಖೆಗಳ ಅಧಿಕಾರಿ ನೌಕರರು ಜೀವದ ಹಂಗು ತೊರೆದು ಹಗಲಿರುಳು ಶ್ರಮಿಸುತ್ತಿದ್ದಾರೆ. ಅಂತಹ ನೌಕರರಿಗೂ ಸುರಕ್ಷತಾ ಕಿಟ್ ಗಳನ್ನು ವಿತರಿಸಲು ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದರು. ಇದಕ್ಕೆ ಸಿಎಂ ಸ್ಪಂದಿಸಿದ್ದಾರೆ.
ಕೋವಿಡ್ 19 ಕರ್ತವ್ಯನಿರತ ಅಧಿಕಾರಿ, ಸಿಬ್ಬಂದಿಯಲ್ಲಿ ಹಲವರು ಸೋಂಕಿಗೆ ಸಿಲುಕಿ ಮರಣ ಹೊಂದುತ್ತಿರುವ ಪ್ರಕರಣಗಳು ದಿನೇ ದಿನೆ ವರದಿಯಾಗುತ್ತಿವೆ. ಕರ್ತವ್ಯ ನಿರತ ಸರ್ಕಾರಿ ಅಧಿಕಾರಿ ನೌಕರರ ಸುರಕ್ಷತೆ ದೃಷ್ಟಿಯಿಂದ ವಿಶೇಷವಾಗಿ ಕ್ಷೇತ್ರ ಹಾಗೂ ಸಮುದಾಯ ಹಂತಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿವಿಧ ಇಲಾಖೆಗಳ ನೌಕರ ಸಿಬ್ಬಂದಿಗಳಿಗೆ ಸ್ಯಾನಿಟೈಸರ್, ಮಾಸ್ಕ್, ಕೈ ಮತ್ತು ಮುಖಗವಸು ಪಿಪಿಇ ಕಿಟ್ ಹಾಗೂ ಪ್ರಾಥಮಿಕ ಹಂತದ ಔಷಧಿಗಳನ್ನು ನೀಡಬೇಕು ಎಂದು ಮನವಿ ಮಾಡಿದರು.
ವೆಂಟಿಲೇಟರ್ ಹಾಸಿಗೆ ಕಾಯ್ದಿರಿಸಿ | ಸೋಂಕು ನಿಯಂತ್ರಣ ಕಾರ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲ ಇಲಾಖೆಗಳ ನೌಕರರು ಸೋಂಕಿಗೆ ಸಿಲುಕಿದ ಸಂದರ್ಭದಲ್ಲಿ ಅಂತಹ ಸಿಬ್ಬಂದಿಗೆ ಪ್ರಥಮ ಆದ್ಯತೆಯಲ್ಲಿ ವೆಂಟಿಲೇಟರ್ ಸೌಲಭ್ಯವಿರುವ ಹಾಸಿಗೆಗಳನ್ನು ಕಾಯ್ದಿರಿಸುವಂತೆಯು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.
https://www.suddikanaja.com/2021/05/14/red-alert-in-shivamogga/