ಸುದ್ದಿ ಕಣಜ.ಕಾಂ
ಶಿವಮೊಗ್ಗ: ನಗರ ವ್ಯಾಪ್ತಿಯಲ್ಲಿ ಗುರುವಾರದಿಂದ ಭಾನುವಾರದ ತನಕ ಈಗ ಜಾರಿಯಲ್ಲಿರುವ ಲಾಕ್ ಡೌನ್ ಇನ್ನಷ್ಟು ಬಿಗಿಗೊಳಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
READ | ಶಿವಮೊಗ್ಗ ನಗರ 4 ದಿನ ಕಂಪ್ಲೀಟ್ ಲಾಕ್ ಡೌನ್, ಏನಿರುತ್ತೆ, ಏನಿರಲ್ಲ?
ಈ ಅವಧಿಯಲ್ಲಿ ಕೈಗಾರಿಕಾ ಚಟುವಟಿಕೆಗಳು, ಗಾಂಧಿ ಬಜಾರ್, ಎಪಿಎಂಸಿ ಮತ್ತು ಸಗಟು ದಿನಸಿ ವ್ಯಾಪಾರವನ್ನು ಸ್ಥಗಿತಗೊಳಿಸಲು ಸಂಬಂಧಪಟ್ಟ ಸಂಘಗಳು ಮುಂದೆ ಬಂದಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಇನ್ನಷ್ಟು ಬಿಗಿಯಾಗಿ ಜಾರಿಗೊಳಿಸಲು ಸಾಧ್ಯವಾಗಲಿದೆ. ಲಾಕ್ ಡೌನ್ ಬಿಗಿಯಾಗಿ ಜಾರಿಗೊಳಿಸುವ ನಿರ್ಧಾರದ ಬಗ್ಗೆ ಸಾರ್ವಜನಿಕರು ಯಾವುದೇ ಗೊಂದಲಕ್ಕೆ ಒಳಗಾಗದೆ ಸಹಕರಿಸುವಂತೆ ಕೋರಿದ್ದಾರೆ.