ಸುದ್ದಿ ಕಣಜ.ಕಾಂ
ಬೆಂಗಳೂರು: ರಾಜ್ಯದ ಎಲ್ಲ ಎಸ್ಕಾಂಗಳಲ್ಲಿ ಕೆಲಸ ಮಾಡುತ್ತಿರುವ ಪವರ್ ಮೆನ್ ಸೇರಿದಂತೆ ಗ್ಯಾಸ್ ಸಿಲಿಂಡರ್ ಮನೆ ಮನೆಗಳಿಗೆ ಪೂರೈಸುವವರು ಹಾಗೂ ಶಿಕ್ಷಕರಿಗೆ ರಾಜ್ಯ ಸರ್ಕಾರ ಫ್ರಂಟ್ ಲೈನ್ ವರ್ಕರ್ಸ್ ಎಂದು ಘೋಷಿಸಿದೆ.
ಪಂಚಾಯಿತಿಗಳ ಮೇಲೆ ವಿಶೇಷ ನಿಗಾ | 10ಕ್ಕೂ ಅಧಿಕ ಪಾಸಿಟಿವ್ ಪ್ರಕರಣಗಳಿರುವ ಪಂಚಾಯಿತಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಜಾಗೃತಿ ಮೂಡಿಸಲಾಗುವುದು. ಜತೆಗೆ, ಪಂಚಾಯಿತಿ ಮಟ್ಟದಲ್ಲಿ ಸ್ಥಳೀಯ ಸ್ವಯಂ ಸೇವಾ ಸಂಘ, ಸಂಸ್ಥೆಯ ಸಹಕಾರದೊಂದಿಗೆ ಕಾರ್ಯನಿರ್ವಹಿಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದರು.