BREAKING NEWS | ಜಿಲ್ಲಾಡಳಿತದಿಂದ ಲಾಕ್ ಡೌನ್ ಪರಿಷ್ಕೃತ ಆದೇಶ, ಬ್ಯಾಂಕ್ ಗಳಿಗಿಲ್ಲ ರಜೆ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಜಿಲ್ಲೆಯಾದ್ಯಂತ ಮೇ 31ರಿಂದ ಜೂನ್ 7ರ ವರೆಗೆ ಜಿಲ್ಲಾಡಳಿತ ಕಠಿಣ ಲಾಕ್ ಡೌನ್ ಘೋಷಿಸಿದ್ದು, ಬ್ಯಾಂಕ್ ಗಳಿಗೆ ರಜೆ ಇರುವುದಿಲ್ಲ ಎಂದು ತಿಳಿಸಲಾಗಿದೆ.

https://www.suddikanaja.com/2021/05/29/one-week-complete-lockdown-in-shivamogga/

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮಾಧ್ಯಮಗೋಷ್ಠಿಯಲ್ಲಿ ಬ್ಯಾಂಕ್ ಗಳಿಗೂ ರಜೆ ಇರುವುದಾಗಿ ತಿಳಿಸಿದ್ದರು. ಆದರೆ, ಜಿಲ್ಲಾಡಳಿತ ಬ್ಯಾಂಕ್ ಗಳಿಗೆ ರಜೆ ಇರುವುದರಿಲ್ಲ ಎಂದು ತಿಳಿಸಿದೆ.
ಈ ಅವಧಿಯಲ್ಲಿ ಔಷಧಿ ಅಂಗಡಿಗಳು, ನೆರೆಹೊರೆಯಲ್ಲಿರುವ ತರಕಾರಿ, ಹಾಲು, ದಿನಸಿ ಅಂಗಡಿಗಳಿಗೆ ಮಾತ್ರ ಅವಕಾಶ ನೀಡಲಾಗುವುದು.
ಸಗಟು ದಿನಸಿ ಮಳಿಗೆಗಳು, ಎಪಿಎಂಸಿಯಲ್ಲಿ ಮಾರಾಟಕ್ಕೆ ಅವಕಾಶ ಇರುವುದಿಲ್ಲ. ಆದರೆ, ಚಿಲ್ಲರೆ ಅಂಗಡಿಗಳಿಗೆ ಅವರು ಸರಕುಗಳನ್ನು ನೇರವಾಗಿ ಪೂರೈಕೆ ಮಾಡಬಹುದಾಗಿದೆ. ತಳ್ಳುಗಾಡಿಗಳಲ್ಲಿ ಬೆಳಗ್ಗೆ 6ರಿಂದ ಸಂಜೆ 6ರ ವರೆಗೆ ನಿಗದಿಪಡಿಸಲಾಗಿರುವ ಪ್ರದೇಶ ವ್ಯಾಪ್ತಿಯಲ್ಲಿ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ.
ಅವಶ್ಯಕ ಸೇವೆಗಳಿಗೆ ಗುರುತಿಸಲಾಗಿರುವ ಸರ್ಕಾರಿ ಕಚೇರಿಗಳನ್ನು ಹೊರತುಪಡಿಸಿ ಬೇರೆ ಯಾವುದೇ ಕಚೇರಿಗಳು ಇರುವುದಿಲ್ಲ. ಕನಿಷ್ಠ ಮಟ್ಟದಲ್ಲಿ ಬ್ಯಾಂಕ್ ಸೇವೆ ಇರುವುದಾಗಿ ತಿಳಿಸಿದರು.
ಹೊಟೇಲ್ ನಲ್ಲಿ ಪಾರ್ಸೆಲ್ ಸೇವೆಗೆ ಅವಕಾಶವಿದೆ. ಮಾರ್ಗಸೂಚಿ ಪ್ರಕಾರ ಮದುವೆಗೆ ಅವಕಾಶವಿದೆ. ಆದರೆ ಮದುವೆಗೆ ಸಂಬಂಧಿಸಿದ ಸಮಾರಂಭಗಳು, ಗೃಹಪ್ರವೇಶ ಇತ್ಯಾದಿಗಳಿಗೆ ಅನುಮತಿ ಇರುವುದಿಲ್ಲ. ಇದನ್ನು ಉಲ್ಲಂಘಿಸಿ ಸಮಾರಂಭಗಳನ್ನು ಆಯೋಜಿಸುವವರ ವಿರುದ್ಞ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

https://www.suddikanaja.com/2021/04/09/lmd-department-penalty-on-shops/

error: Content is protected !!