ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕಂಟೈನ್ಮೆಂಟ್ ನಿಯಮ ಉಲ್ಲಂಘಿಸುವವರನ್ನು ಗುರುತಿಸಿ ಮೊಬೈಲ್ನಲ್ಲಿ ಛಾಯಾಚಿತ್ರ ಅಥವಾ ವಿಡಿಯೋ ತೆಗೆದು ಪೊಲೀಸರಿಗೆ ದೂರು ನೀಡಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿದರು.
ತಾಲೂಕು ಅಧಿಕಾರಿಗಳೊಂದಿಗೆ ಗುರುವಾರ ನಡೆದ ವಿಡಿಯೋ ಸಂವಾದದಲ್ಲಿ ಮಾತನಾಡಿ, ನಿಯಮಗಳನ್ನು ಉಲ್ಲಂಘಿಸುವವರ ಮೇಲೆ ನಿಗಾ ಇರಿಸಲು ವಿವಿಧ ಇಲಾಖೆಗಳ ಅಧಿಕಾರಿಗಳನ್ನು ನಿಯೋಜಿಸಬೇಕು ಎಂದು ಸೂಚನೆ ನೀಡಿದರು.
https://www.suddikanaja.com/2020/11/12/new-police-station-and-facility-to-police-department/
ಕಂಟೈನ್ಮೆಂಟ್ ಜೋನ್ಗೆ ನಿತ್ಯ ಭೇಟಿ | ಕಂಟೈನ್ಮೆಂಟ್ ಪ್ರದೇಶದ ಪ್ರತಿ ಮನೆಗಳಿಗೆ ಆಶಾ ಕಾರ್ಯಕರ್ತೆಯರು ಪ್ರತಿದಿನ ಭೇಟಿ ನೀಡಿ ಆರೋಗ್ಯ ಸ್ಥಿತಿಗತಿ ಪರಿಶೀಲನೆ ನಡೆಸಬೇಕು ಎಂದು ನಿರ್ದೇಶಿಸಿದರು.
ರೋಗ ಲಕ್ಷಣವಿರುವ ಪ್ರತಿಯೊಬ್ಬರಿಗೂ ಕೊರೊನಾ ಪರೀಕ್ಷೆಯನ್ನು ನಡೆಸಲು ಕ್ರಮ ಕೈಗೊಳ್ಳಬೇಕು. ಅಗತ್ಯ ಸಾಮಗ್ರಿಗಳನ್ನು ಅಗತ್ಯವಿರುವವರಿಗೆ ಮನೆಯ ಬಾಗಿಲಿಗೆ ತಲುಪಿಸಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ್ ವಟಾರೆ, ಯೋಜನಾ ನಿರ್ದೇಶಕ ನಾಗೇಂದ್ರ ಹೊನ್ನಳ್ಳಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ, ಸಿಮ್ಸ್ ನಿರ್ದೇಶಕ ಡಾ. ಸಿದ್ದಪ್ಪ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
https://www.suddikanaja.com/2021/05/09/full-power-to-police-in-lock-down/