ಶಿವಮೊಗ್ಗದಲ್ಲಿ ಭಾರೀ ಮಳೆ ಸಾಧ್ಯತೆ, ರೆಡ್ ಅಲರ್ಟ್ ಘೋಷಣೆ, ಡಿಸಿ ಖಡಕ್ ವಾರ್ನಿಂಗ್

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಹವಾಮಾನ ತಜ್ಞರ ಮಾಹಿತಿಯಂತೆ ನಾಳೆಯಿಂದ ಮುಂದಿನ 2ರಿಂದ 3 ದಿನಗಳ ಕಾಲ ರಾಜ್ಯದಲ್ಲಿ ಸಾಮಾನ್ಯದಿಂದ ಭಾರೀ ಮಳೆ ಆಗುವ ಸಾಧ್ಯತೆ ಇದೆ. ಸಾರ್ವಜನಿಕರು ಹಾಗೂ ತಗ್ಗು ಪ್ರದೇಶದ ನಿವಾಸಿಗಳು ಮುಂಜಾಗ್ರತಾ ಕ್ರಮವಾಗಿ ಸುರಕ್ಷತಾ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಸೂಚನೆ ನೀಡಿದ್ದಾರೆ.

READ | ಶುಗರ್, ಕಿಡ್ನಿ ಕಲ್ಲಿಗೆ ರಾಮ ಬಾಳೆ ದಿಂಡು, ಈ‌ ನವೋದ್ಯಮಕ್ಕೆ ಭರ್ಜರಿ‌ ರೆಸ್ಪಾನ್ಸ್, ರೆಡಿ ಟು ಕುಕ್ ಯಾರಿಗೆ ಸಂಪರ್ಕಿಸಬೇಕು?

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಎಲ್ಲ ತಾಲೂಕುಗಳ ತಹಸೀಲ್ದಾರರು ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ, ಅಗತ್ಯ ಹಾಗೂ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಕೊರೊನಾ ಸೋಂಕು ತಾಂಡವವಾಡುತ್ತಿರುವಾಗಲೇ ಮುಂಗಾರು ಮಳೆಯಿಂದ ಸಂಭವಿಸಬಹುದಾದ ಜೀವ ಮತ್ತು ಪ್ರಾಣ ಹಾನಿಗಳನ್ನು ನಿಯಂತ್ರಿಸುವ ಕಾರ್ಯದಲ್ಲಿ ರಕ್ಷಣಾ, ಕಂದಾಯ, ಅಗ್ನಿಶಾಮಕ, ಮೆಸ್ಕಾಂ ಹಾಗೂ ಸಂಬಂಧಿಸಿದ ಎಲ್ಲ ಇಲಾಖೆಗಳ ಅಧಿಕಾರಿಗಳು ಸಿದ್ದತೆಗಳನ್ನು ಕೈಗೊಂಡು ಸದಾ ಸನ್ನದ್ಧರಾಗಿರುವಂತೆ ತಿಳಿಸಿದರು.
ಮುಂಗಾರು ಅನಾಹುತಕ್ಕೆ 25 ಲಕ್ಷ ರೂ. ಪರಿಹಾರ | ಮುಂಗಾರು ಮಳೆಯಿಂದಾಗುವ ಅನಾಹುತದ ಪರಿಹಾರ ಕಾರ್ಯಗಳಿಗೆ ತಾಲೂಕುವಾರು 25 ಲಕ್ಷ ರೂಪಾಯಿಯನ್ನು ಮಂಜೂರು ಮಾಡಲಾಗುವುದು ಎಂದವರು ನುಡಿದರು.
ಇದೆ ಸಂದರ್ಭದಲ್ಲಿ ಸಕಾಲಕ್ಕೆ ನೆರವಿಗೆ ಧಾವಿಸುವ ಪ್ರಕೃತಿ ವಿಕೋಪ ಕಾರ್ಯಾಚರಣೆ ತಂಡದ ಸದಸ್ಯರ ಮೊಬೈಲ್ ನಂಬರ್ ಗಳನ್ನು ಸಂಗ್ರಹಿಸಿಟ್ಟುಕೊಳ್ಳುವಂತೆ ಹಾಗೂ ಮಳೆಗಾಳಿಯಿಂದ ಧರೆಗುರುಳುವ ಮರಗಳನ್ನು ತೆರವುಗೊಳಿಸಲು ಅಗತ್ಯ ಸಿಬ್ಬಂದಿಯನ್ನು ಸಿದ್ದವಾಗಿರಲು ಸೂಚಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ತಮ್ಮ ಕಾರ್ಯಕ್ಷೇತ್ರದ ವ್ಯಾಪ್ತಿಯಲ್ಲಿನ ಚರಂಡಿಗಳು ಸರಾಗವಾಗಿ ಮಳೆ ನೀರನ್ನು ಹರಿಯುವಂತೆ ಸ್ವಚ್ಚವಾಗಿಟ್ಟುಕೊಳ್ಳುವಲ್ಲಿ ಕ್ರಮ ಕೈಗೊಳ್ಳಬೇಕು. ಮಳೆ ಹಾನಿಯಿಂದ ರಕ್ಷಣೆಗಾಗಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಪ್ರತ್ಯೇಕ ಸಹಾಯವಾಣಿ ಕೇಂದ್ರವನ್ನು ತೆರೆದು ಸಿಬ್ಬಂದಿಯನ್ನು ನಿಯೋಜಿಸುವಂತೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್.ವೈಶಾಲಿ, ಜಿಲ್ಲಾ ಪೊಲೀಸ್ ವರಿಷ್ಠಾದಿಕಾರಿ ಲಕ್ಷ್ಮೀಪ್ರಸಾದ್, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಎಲ್ಲ ತಾಲೂಕುಗಳ ತಹಸೀಲ್ದಾರರು, ಕಾರ್ಯನಿರ್ವಾಹಕ ಅಧಿಕಾರಿಗಳು ಉಪಸ್ಥಿತರಿದ್ದರು.

https://www.suddikanaja.com/2021/01/06/rainfall-in-shivamogga-malenadu/

error: Content is protected !!