ಸುದ್ದಿ ಕಣಜ.ಕಾಂ
ಶಿವಮೊಗ್ಗ: ನಗರದ ಹೊರ ವಲಯದ ಸೋಗಾನೆಯಲ್ಲಿ ಕೈಗೊಳ್ಳಲಾಗಿರುವ ವಿಮಾನ ನಿಲ್ದಾಣ ಕಾಮಗಾರಿ ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದರು.
https://www.suddikanaja.com/2021/05/14/shivamogga-airport-will-complete-within-8-months/
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ಮೆಗಾ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.
ಈಗಾಗಲೇ ಪ್ರಗತಿಯಲ್ಲಿರುವ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಆಗದಂತೆ ತ್ವರಿತ ಗತಿಯಲ್ಲಿ ಅನುಷ್ಠಾನಗೊಳಿಸಬೇಕು ಎಂದು ಸೂಚನೆ ನೀಡಿದರು.
ವಿಮಾನ ನಿಲ್ದಾಣದ ರನ್ ವೇ, ಸಂಪರ್ಕ ರಸ್ತೆ, ಕಾಂಪೌಂಡ್ ನಿರ್ಮಾಣ ಕಾರ್ಯ ನಡೆಯುತ್ತಿದೆ. ಅದನ್ನು ನೀಡಿರುವ ಡೆಡ್ಲೈನ್ ಒಳಗೆ ಪೂರ್ಣಗೊಳಿಸಬೇಕು ಎಂದು ಹೇಳಿದರು. ಇನ್ನುಳಿದಂತೆ, ಅಕ್ಕಮಹಾದೇವಿಯ ಜನ್ಮ ಸ್ಥಳ ಅಭಿವೃದ್ಧಿ, ಹೊಸ ಜಿಲ್ಲಾಡಳಿತ ಭವನ ನಿರ್ಮಾಣ, ರಿಂಗ್ ರೋಡ್, ತುಮಕೂರು-ಶಿವಮೊಗ್ಗ ಚತುಷ್ಪಥ ರಸ್ತೆ, ಸಿಗಂದೂರು ಸೇತುವೆ ಹೀಗೆ ಎಲ್ಲ ಮೆಗಾ ಪ್ರಾಜೆಕ್ಟ್ ಗಳನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸಬೇಕು ಎಂದು ನಿರ್ದೇಶಿಸಿದರು.
ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ್ ವಟಾರೆ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
https://www.suddikanaja.com/2021/01/02/shivamogga-airport-work-will-compete-in-2021/