ಭದ್ರಾವತಿ ಬೆಡಗಿ ಪ್ರಿಯಾಂಕಾ ತಿಮ್ಮೇಶ್ ನಟನೆಯ ಚಿತ್ರ ಶುಗರ್ ಲೆಸ್ ಸಿನಿಮಾದ ಪೋಸ್ಟರ್ ರಿಲೀಸ್

 

 

ಸುದ್ದಿ ಕಣಜ.ಕಾಂ
ಭದ್ರಾವತಿ: ಕೆ.ಎಂ.ಶಶಿಧರ್ ನಿರ್ದೇಶನದ ಚೊಚ್ಚಲ ಸಿನಿಮಾ ‘ಶುಗರ್ ಲೆಸ್’ನ ಪೋಸ್ಟರ್ ಬಿಡುಗಡೆಯಾಗಿದೆ. ಅದನ್ನು ಚಿತ್ರದ ನಾಯಕಿ ಭದ್ರಾವತಿ ಬೆಡಗಿ ಪ್ರಿಯಾಂಕಾ ತಿಮ್ಮೇಶ್ ಅವರು ತಮ್ಮ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Sugar lessಪೋಸ್ಟರ್ ಅನ್ನು ಹಂಚಿಕೊಂಡಿರುವ ಪ್ರಿಯಾಂಕಾ ಅವರು ‘ನನ್ನ ಮುಂಚಿನ ಶುಗರ್ ಲೆಸ್ ಸಿನಿಮಾದ ಪೋಸ್ಟರ್, ಸ್ವಲ್ಪ ಲೇಟಾಗ್ ಪೋಸ್ಟ್ ಮಾಡುತ್ತಿದ್ದೇನೆ’ ಎಂದು ಫೇಸ್ಬುಕ್ ವಾಲ್ ನಲ್ಲಿ ಬರೆದುಕೊಂಡಿದ್ದಾರೆ.

READ | ಬಿಗ್ ಬಾಸ್ ಗೆ ಎಂಟ್ರಿ ಕೊಟ್ಟ ಭದ್ರಾವತಿ ಹುಡುಗಿ!

ದಿಯಾ ಖ್ಯಾತಿಯ ಪೃಥ್ವಿ ಅಂಬಾರ್ ನಾಯಕ ನಟರಾಗಿ ಅಭಿನಯಿಸುತ್ತಿದ್ದಾರೆ. ದತ್ತಣ್ಣ ಕೂಡ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಅನೂಪ್ ಸೀಳಿನ್ ಸಂಗೀತ, ಲವಿತ್ ಕ್ಯಾಮೆರಾ ಕೈಚಳಕ ತೋರಿದ್ದಾರೆ. ಪ್ರಿಯಾಂಕಾ ಅವರು ತಮಿಳು ಮತ್ತು ಮಲಯಾಳಂನಲ್ಲಿ ಕೂಡ ನಟಿಸಿದ್ದಾರೆ.

error: Content is protected !!