ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕೊರೊನಾ ಪ್ರಕರಣಗಳು 10ಕ್ಕಿಂತ ಹೆಚ್ಚು ಇರುವ ಪ್ರದೇಶಗಳನ್ನು ಕಡ್ಡಾಯವಾಗಿ ಕಂಟೈನ್ಮೆಂಟ್ ವಲಯವಾಗಿ ಗುರುತಿಸಿ ಅಲ್ಲಿನ ನಿವಾಸಿಗಳ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ ವಿಧಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೂಚನೆ ನೀಡಿದರು.
https://www.suddikanaja.com/2021/05/27/police-complaint-against-violation-rule-in-containment-zone/
ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಗುರುವಾರ ವಿಡಿಯೋ ಸಂವಾದ ನಡೆಸಿ ಕೊರೊನಾ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಪರಿಶೀಲನೆ ನಡೆಸಿ ಅವರು ಮಾತನನಾಡಿದರು.
ಕೊರೊನಾ ಹಾಟ್ ಸ್ಪಾಟ್ಗಳಲ್ಲಿ ಸಂಚಾರ ವಾಹನದ ಮೂಲಕ ಟೆಸ್ಟ್ | ಗ್ರಾಮೀಣ ಭಾಗದಲ್ಲಿ ಕೆಲವು ಪ್ರದೇಶಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಿನ ಪ್ರಮಾಣದಲ್ಲಿ ವರದಿಯಾಗುತ್ತಿವೆ. ಗಡಿಭಾಗದ ಗ್ರಾಮಗಳಲ್ಲಿ ಇಂತಹ ಪ್ರಕರಣಗಳು ವರದಿಯಾಗುತ್ತಿವೆ. ಅಂತಹ ಹಾಟ್ಸ್ಪಾಟ್ಗಳನ್ನು ಗುರುತಿಸಿ ಕೊರೊನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ಅಂತಹ ಕಡೆಗಳಲ್ಲಿ ಸಂಚಾರಿ ವಾಹನಗಳ ಮೂಲಕ ಕೊರೊನಾ ಪರೀಕ್ಷೆ ನಡೆಸುವಂತೆ ತಹಸೀಲ್ದಾರ್ಗಳಿಗೆ ಸೂಚಿಸಿದರು.
https://www.suddikanaja.com/2021/04/30/mandatory-to-display-duty-doctor-names-before-ward-board/
ಗ್ರಾಮೀಣ ಪ್ರದೇಶಗಳಲ್ಲಿ ಮಾತ್ರವಲ್ಲದೆ ನಗರ ಪ್ರದೇಶಗಳಲ್ಲೂ ಕೊರೊನಾ ಪಾಸಿಟಿವ್ ವ್ಯಕ್ತಿಗಳಿಗೆ ಹೋಮ್ ಐಸೋಲೇಷನ್ಗೆ ಅವಕಾಶ ನೀಡದೆ, ಕೋವಿಡ್ ಕೇರ್ ಸೆಂಟರ್ನಲ್ಲಿ ದಾಖಲಿಸಬೇಕು. ಖಾಸಗಿ ಆಸ್ಪತ್ರೆ ಮತ್ತು ಕ್ಲಿನಿಕ್ಗಳಲ್ಲಿ ಚಿಕಿತ್ಸೆಗೆ ಆಗಮಿಸುವ ಕೋವಿಡ್ ಲಕ್ಷಣವಿರುವ ವ್ಯಕ್ತಿಗಳ ವಿವರಗಳನ್ನು ಕಡ್ಡಾಯವಾಗಿ ಪಡೆಯಬೇಕು.
ಅಂತಹ ಮಾಹಿತಿಯನ್ನು ನಿಗದಿತ ನಮೂನೆಯಲ್ಲಿ ಒದಗಿಸಲು ವಿಫಲರಾಗುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇದೇ ರೀತಿ ಅಧಿಕೃತ ಪರವಾನಗಿ ಪಡೆಯದೆ ವೈದ್ಯಕೀಯ ಚಿಕಿತ್ಸೆ ನೀಡುವ ನಕಲಿ ವೈದ್ಯರ ವಿರುದ್ಧ ಕಾರ್ಯಾಚರಣೆ ನಡೆಸುವಂತೆ ಅವರು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ್ ವಟಾರೆ, ಯೋಜನಾ ನಿರ್ದೇಶಕ ನಾಗೇಂದ್ರ ಹೊನ್ನಳ್ಳಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ, ಸಿಮ್ಸ್ ನಿರ್ದೇಶಕ ಡಾ. ಸಿದ್ದಪ್ಪ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
https://www.suddikanaja.com/2021/04/04/elephant-attack-on-doctor-at-sakrebailu-elephant-camp/