ಸುದ್ದಿ ಕಣಜ.ಕಾಂ
ಶಿವಮೊಗ್ಗ: ಯುವತಿಯು ಪ್ರೀತಿಸಲು ನಿರಾಕರಿಸಿದ್ದಕ್ಕೆ ವ್ಯಕ್ತಿಯೊಬ್ಬ ಆಕೆಯ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಿ ಫೋಟೊಗಳನ್ನು ಅಪ್ ಲೋಡ್ ಮಾಡಿರುವುದಾಗಿ ಆರೋಪಿಸಿ ಶಿವಮೊಗ್ಗ ಎಸ್.ಇ.ಎನ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿತ್ರದುರ್ಗ ಮೂಲದ ಯುವಕ ಹಾಗೂ ಶಿವಮೊಗ್ಗ ಮೂಲದ ಯುವತಿ ಪರಸ್ಪರ ಫೇಸ್ಬುಕ್ ನಲ್ಲಿ ಭೇಟಿಯಾಗಿದ್ದು, ವಿಳಾಸ ವಿನಿಮಯ ಮಾಡಿಕೊಂಡಿದ್ದಾರೆ. ಯುವಕ ಒಮ್ಮೆ ಹುಡುಗಿಯನ್ನು ಶಿವಮೊಗ್ಗಕ್ಕೆ ಬಂದು ಭೇಟಿ ಕೂಡ ಆಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಭೇಟಿಯಾದ ನಂತರ ಪ್ರೀತಿಸುವಂತೆ ಯುವಕ ಪ್ರೇಮ ನಿವೇದನೆ ಮಾಡಿದ್ದಾನೆ. ಆದರೆ, ಯುವತಿ ಪ್ರೀತಿಸಲು ನಿರಾಕರಿಸಿದ್ದಾಳೆ. ಆಗ 2020ರ ಡಿಸೆಂಬರ್ ನಲ್ಲಿ ಯುವತಿಯ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ ಆಕೆಯ ಫೋಟೊಗಳನ್ನು ಅಪ್ ಲೋಡ್ ಮಾಡಿದ್ದಾನೆ ಎಂದು ಯುವತಿ ದೂರಿನಲ್ಲಿ ಆರೋಪಿಸಿದ್ದಾಳೆ. ತನಿಖೆ ಮುಂದುವರಿದಿದೆ.